ಮಹದೇವಪುರ ಕ್ಷೇತ್ರದಲ್ಲಿ ತಾವು ಸ್ಪರ್ಧಿಸಲ್ಲ ಅಂತ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು (ಸೆ.22): ಮಹದೇವಪುರ ಕ್ಷೇತ್ರದಲ್ಲಿ ತಾವು ಸ್ಪರ್ಧಿಸಲ್ಲ ಅಂತ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ನಾಳೆ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು. ನಾನು ಇನ್ನೂ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಅನ್ನೋದನ್ನು ನಿರ್ಧರಿಸಿಲ್ಲ. ಮಹದೇವಪುರದಲ್ಲಿ ಸ್ಪರ್ಧಿಸುವ ಇರಾದೆ ಇಲ್ಲ ಅಂತಾ ಹೇಳಿದ್ದಾರೆ. ಹೈಕಮಾಂಡ್ ನಿರ್ದೇಶನದ ಮೇರೆಗೆ ಕಣಕ್ಕಿಳಿಯುವುದಾಗಿ ಪರಮೇಶ್ವರ್ ತಿಳಿಸಿದ್ದಾರೆ. ಜೊತೆಗೆ ಮಹದೇವಪುರದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು ಪಕ್ಷ ಸಂಘಟನೆಗೆ ಅನುಕೂಲವಾಗಲೆಂದು ಅಷ್ಟೇ. ಮತ್ಯಾರನ್ನೋ ಟಾರ್ಗೆಟ್ ಮಾಡುವುದಕ್ಕಾಗಿ ಅಲ್ಲ ಎಂದಿದ್ದಾರೆ.
