ಈಗ ಬಂದ್ ಮೂಲಕ ಏನು ಮಾಡಲು ಹೊರಟಿದ್ದಾರೆಂದು ಗೊತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಹೈಟೆಕ್ ಸೌಲಭ್ಯವಿದೆ. ರೋಗಿಗಳು ಅಲ್ಲಿ ಹೋಗಿ ನಿರ್ಭಯವಾಗಿ ಚಿಕಿತ್ಸೆ ಪಡೆಯಬಹುದು ಎನ್ನುವ ಮೂಲಕ ಖಾಸಗಿ ವೈದ್ಯರ ಪ್ರತಿಭಟನೆಗೆ ರಮೇಶ್ ಕುಮಾರ್ ಟಾಂಗ್ ನೀಡಿದ್ದಾರೆ.
ಕೋಲಾರ(ನ.03): ಖಾಸಗಿ ಆಸ್ಪತ್ರೆ ವೈದ್ಯರು ನಡೆಸುತ್ತಿರುವ ಮುಷ್ಕರವೇ ನನಗೆ ಗೊತ್ತಿಲ್ಲ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.
ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್‍ಮೆಂಟ್ ಕಾಯ್ದೆ ತಿದ್ದುಪಡಿ ಕುರಿತಂತೆ ಖಾಸಗಿ ಆಸ್ಪತ್ರೆಗಳ ಜೊತೆ ಚರ್ಚಿಸಿಯೇ ವಿಧೇಯಕವನ್ನು ಮಂಡಿಸಿದ್ದೇನೆ. ಹಾಗಾಗಿ ಖಾಸಗಿ ಆಸ್ಪತ್ರೆ ವೈದ್ಯರು ಯಾವ ಕಾರಣಕ್ಕಾಗಿ ಮುಷ್ಕರ ನಡೆಸುತ್ತಿದ್ದಾರೆ ಎಂದು ಗೊತ್ತಿಲ್ಲವೆಂದು ರಮೇಶ್ ಕುಮಾರ್ ತಿಳಿಸಿದ್ದಾರೆ.