ನಾನು ಕಾಂಗ್ರೆಸ್ ಸೇರಿಲ್ಲ: ಮಾಜಿ ಜೆಡಿಎಸ್ ಶಾಸಕ ಸ್ಪಷ್ಟನೆ

ಕೆ.ಆರ್.ಪೇಟೆ(ಸೆ.29): ವಿಧಾನಸಭಾ ಚುನಾವಣೆ ಯಲ್ಲಿ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು ಬೇರೆ ಯಾವುದೇ ಪಕ್ಷವನ್ನು ಸೇರುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಶಾಸಕ ಬಿ.ಪ್ರಕಾಶ್ ಗುರುವಾರ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಪ್ರಕಾಶ್ ಕಾಂಗ್ರೆಸ್ ಸೇರಿದ್ದಾರೆ ಎಂಬುದು ನಿಜವಲ್ಲ. ಇದರಿಂದ ತಾಲೂಕಿನ ಜೆಡಿಎಸ್ ಪಕ್ಷದ ಕಾರ್ಯಕರ್ತರಲ್ಲಿ ಮತ್ತು ಅಭಿಮಾನಿಗಳಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ ಎಂದರು.