ಮುಂಬೈ: ನಾನು ಆರೋಗ್ಯವಾಗಿದ್ದೇನೆ. ನನ್ನ ಆರೋಗ್ಯದ ಬಗ್ಗೆ ಯಾರಿಗೂ ಆತಂಕ ಬೇಡ. ಮೇಲಾಗಿ ನಾನು ಗರ್ಭಿಣಿಯಾಗಿರುವ ಸಾಧ್ಯತೆಯಂತೂ ಇಲ್ಲವೇ ಇಲ್ಲ ಎಂದು ಖ್ಯಾತ ನಟಿ ಶಿಲ್ಪಾ ಶೆಟ್ಟಿಸ್ಪಷ್ಟಪಡಿಸಿದ್ದಾರೆ. 

ಶಿಲ್ಪಾ ಇತ್ತೀಚೆಗೆ ನಗರದ ಲ್ಯಾಬ್‌ ಒಂದರಿಂದ ಹೊರಬರುವ ಫೋಟೋ ಒಂದು ಆನ್‌ಲೈನ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಗ್ರಾಸವಾಗಿತ್ತು. ಅವರನ್ನು ಅನಾರೋಗ್ಯ ಕಾಡುತ್ತಿದೆಯೇ? ಅವರು ಮತ್ತೆ ಗರ್ಭಿಣಿಯಾಗಿದ್ದಾರೆಯೇ? ಎಂಬೆಲ್ಲಾ ಪ್ರಶ್ನೆಗಳನ್ನು ಅಭಿಮಾನಿಗಳು ಹಾಕಿದ್ದರು.

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಲ್ಪಾ, ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಲ್ಯಾಬ್‌ಗೆ ತೆರಳಿದ್ದೆ. ಅದು ಬಿಟ್ಟರೆ ಆತಂಕಕ್ಕೆ ಕಾರಣವಾದ ಯಾವುದೇ ಅಂಶಗಳೂ ಇಲ್ಲ ಎಂದು ಹೇಳಿದ್ದಾರೆ.