ಬೆಂಗಳೂರು : ನಿಗಮ ಮಂಡಳಿ ನೇಮಕ ಪ್ರಕ್ರಿಯೆ ನಡೆದರೂ ಬಿಡಿಎ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಿಗಮ ಮಂಡಳಿ ನೇಮಕ ಮತ್ತು ಸಂಪುಟ ವಿಸ್ತರಣೆ ಆಗಬೇಕು. ಆದಷ್ಟು ಬೇಗ ಸಂಪುಟ ವಿಸ್ತರಣೆ ಆಗಿದ್ದರೆ ಒಳ್ಳೆಯದಿತ್ತು. ಇನ್ನೂ ಚೆನ್ನಾಗಿ ಕೆಲಸ ಮಾಡಲು ಸಹಾಯವಾಗುತ್ತಿತ್ತು ಎಂದ ಅವರು, ನಿಗಮ ಮಂಡಳಿ ನೇಮಕ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಪ್ರಶ್ನೆಯಿಲ್ಲ.

ಅದನ್ನೆಲ್ಲಾ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಪಕ್ಷದ ವಲಯದಲ್ಲಿ ತೀರ್ಮಾನ ಕೈಗೊಳ್ಳಬೇಕಿದೆ. ರಾಮನಗರ, ಜಮಖಂಡಿ ಚುನಾವಣೆ ಯಾರಿಗೆ ಯಾವ ಕ್ಷೇತ್ರ ಎಂದು ತೀರ್ಮಾನ ಆಗಿಲ್ಲ. ಇದೆಲ್ಲಾ ಚರ್ಚೆಯ ಹಂತದಲ್ಲಿದೆ ಎಂದರು.