ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಿದ್ದಗಂಗಾ ಶ್ರೀಗಳ ಬೆಂಬಲಕ್ಕೆ ಸಂಬಂಧಿಸಿ ಉಂಟಾದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಾನು ತನ್ನ ಹೇಳಿಕೆಗೆ ಬದ್ಧವಾಗಿದ್ದೇನೆ ಎಂದು ಹೇಳಿದ್ದಾರೆ.
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಿದ್ದಗಂಗಾ ಶ್ರೀಗಳ ಬೆಂಬಲಕ್ಕೆ ಸಂಬಂಧಿಸಿ ಉಂಟಾದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಾನು ತನ್ನ ಹೇಳಿಕೆಗೆ ಬದ್ಧವಾಗಿದ್ದೇನೆ ಎಂದು ಹೇಳಿದ್ದಾರೆ.
ಶ್ರೀಗಳು ಎಲ್ಲಾ ಭಾರತೀಯರ ಪಾಲಿಗೆ ನಡೆದಾಡುತ್ತಿರುವ ದೇವರಿದ್ದಂತೆ. ನನಗೆ ಅವರ ಬಗ್ಗೆ ಅಪಾರ ಗೌರವವಿದೆ. ಆದರೆ ನಾನು ನನ್ನ ಹೇಳಿಕೆಗೆ ಬದ್ಧವಾಗಿದ್ದೇನೆ ಎಂದು ಎಂ,ಬಿ.ಪಾಟೀಲ್ ಟ್ವೀಟಿಸಿದ್ದಾರೆ. ನಾನು ರಾಜಕೀಯಕ್ಕೆ ಬೆದರುವವನಲ್ಲ, ಏನೇ ಆದರೂ ಎದುರಿಸಲು ಸಿದ್ಧ ದು ಅವರು ಹೇಳಿದ್ದಾರೆ.
Siddaganga Sri is Nadedaduva Devaru for all Indians, deepest respects. The present vindictiveness is known to all. My Statement stands same.
ಈ ಹಿಂದೆ ಎಂ.ಬಿ ಪಾಟೀಲ್ ಪ್ರತ್ಯೇಕ ಧರ್ಮಕ್ಕೆ ಶ್ರೀಗಳ ಬೆಂಬಲವಿದೆ ಎಂದು ಹೇಳಿದ್ದರು. ಈ ಬಗ್ಗೆ ಸಾಕಷ್ಟು ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.
ಲಿಂಗಾಯತ ಮತ್ತು ವೀರಶೈವ ಪ್ರತ್ಯೇಕ ಎಂದು ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ಸಚಿವ ಎಂ.ಬಿ. ಪಾಟೀಲ್ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಸಿದ್ದಗಂಗಾ ಶ್ರೀಗಳು ಪತ್ರಿಕಾ ಪ್ರಕಟಣೆಯಲ್ಲಿ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಎಂ.ಬಿ. ಪಾಟೀಲ್ ವಿರುದ್ಧ ಬಿಜೆಪಿ ನಾಯಕ ಸೋಮಣ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.
