ರಾಜ್ಯದಲ್ಲಿ ಖಾಸಗಿ ವೈದ್ಯಕೀಯ ನಿಯಂತ್ರಣ ಮಸೂದೆ ಬಗ್ಗೆ ಚರ್ಚೆ ತಾರಕಕ್ಕೇರಿದ ಬೆನ್ನಲ್ಲೆ ಜನ ಸಾಮಾನ್ಯರು ರಾಜ್ಯ ಆರೋಗ್ಯ ಸಚಿವ ರಮೇಶ್‌ಕುಮಾರ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ರಾಜ್ಯದಲ್ಲಿ ಖಾಸಗಿ ವೈದ್ಯಕೀಯ ನಿಯಂತ್ರಣ ಮಸೂದೆ ಬಗ್ಗೆ ಚರ್ಚೆ ತಾರಕಕ್ಕೇರಿದ ಬೆನ್ನಲ್ಲೆ ಜನ ಸಾಮಾನ್ಯರು ರಾಜ್ಯ ಆರೋಗ್ಯ ಸಚಿವ ರಮೇಶ್‌ಕುಮಾರ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಬೆಂಬಲ ವ್ಯಕ್ತಪಡಿಸಿದ್ದಾರೆ.

ಜನರ ಆರೋಗ್ಯಕ್ಕಿಂತ ಮಂತ್ರಿ ಪದವಿ ದೊಡ್ಡದಲ್ಲ. ಅದನ್ನು ಮಂಡಿಸದೇ ಹೋದಲ್ಲಿ ರಾಜೀನಾಮೆ ನೀಡಲು ಸಿದ್ಧ ಎಂಬ ರಮೇಶಕುಮಾರ್ ಹೇಳಿಕೆಗೆ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ಜತೆಗೆ ‘ಐ ಸಪೋರ್ಟ್ ರಮೇಶಕುಮಾರ’ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಫೇಸ್ ಬುಕ್, ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಗ್ಯ ಸಚಿವ ರಮೇಶಕುಮಾರ ಅವರ ನಡೆಯನ್ನು ಬಹುತೇಕರು ಸಮರ್ಥಿಸುತ್ತಿದ್ದಾರೆ.