‘ಜೆಡಿಎಸ್ ಪಕ್ಷವನ್ನು ನಾನು ಬಿಡಲಿಲ್ಲ, ಪಕ್ಷದ ಅಧ್ಯಕ್ಷನಾಗಿದ್ದ ನನ್ನನ್ನು ಪಕ್ಷದಿಂದ ಹೊರಹಾಕಲಾಯಿತು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಬಾಗಲಕೋಟೆ/ ಹುಬ್ಬಳ್ಳಿ: ‘ಜೆಡಿಎಸ್ ಪಕ್ಷವನ್ನು ನಾನು ಬಿಡಲಿಲ್ಲ, ಪಕ್ಷದ ಅಧ್ಯಕ್ಷನಾಗಿದ್ದ ನನ್ನನ್ನು ಪಕ್ಷದಿಂದ ಹೊರಹಾಕಲಾಯಿತು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಕುಮಾರ ಪರ್ವ ಯಾತ್ರೆ ವೇಳೆ ಮಾತನಾಡಿದ್ದ ಕುಮಾರಸ್ವಾಮಿ ಅವರು, ಸಿದ್ದರಾಮಯ್ಯ ಪಕ್ಷವನ್ನು ಬಿಟ್ಟು ಹೋದರು ಎಂದು ಆರೋಪಿಸಿದ್ದರು.

ಇದಕ್ಕೆ ಜಮಖಂಡಿ ತಾಲೂಕಿನ ಹಿಪ್ಪರಗಿಯಲ್ಲಿ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ನಾನು ಜೆಡಿಎಸ್ ಬಿಟ್ಟಿದ್ದೇನೆ ಎಂದು ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ. ನಾನು ಪಕ್ಷ ತೊರೆಯಲಿಲ್ಲ. ಪಕ್ಷದ ಅಧ್ಯಕ್ಷನಾಗಿದ್ದ ನನ್ನನ್ನು ಹೊರ ಹಾಕಿದರು’ ಎಂದು ತಿಳಿಸಿದರು.