ಬೆಂಗಳೂರು (ಸೆ.21): ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ವಿಧಾನಮಂಡಲದಲ್ಲಿ ಸಿಎಂ ನಿರ್ಧಾರವನ್ನು ಬೆಂಬಲಿಸುತ್ತೇವೆ ಎಂದು ಬಿಎಸ್'ವೈ ಹೇಳಿದ್ದಾರೆ.
ರಾಜ್ಯ ಸರ್ಕಾರದ ನಡೆಗೆ ನಮ್ಮ ಅಸಮಾಧಾನವಿದೆ. ಕೇಂದ್ರಕ್ಕೂ ಕಾವೇರಿಗೂ ಯಾವುದೇ ಸಂಬಂಧವಿಲ್ಲ ಎಂದು ಸುವರ್ಣನ್ಯೂಸ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ವೈ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸುತ್ತೇವೆ. ಕಾವೇರಿ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ. ಮೋದಿ ಸೇರಿದಂತೆ ಇತರ ನಾಯಕರನ್ನು ಸಂಪರ್ಕಿಸಿದ್ದೇವೆ
ಎಂದು ಹೇಳಿದರು. .
ಸರ್ವಪಕ್ಷ ಸಭೆ ಬಗ್ಗೆ ನಮಗೆ ನಂಬಿಕೆ ಇಲ್ಲ . ನಮ್ಮ ಸಲಹೆಗಳನ್ನು ಅವರು ಸ್ವೀಕರಿಸುವುದಿಲ್ಲ. ಹಾಗಾಗಿ ಇಂದು ನಡೆದ ಸರ್ವಪಕ್ಷ ಸಭೆಗೆ ಹಾಜರಾಗಿಲ್ಲ ಎಂದು ಬಿಎಸ್ವೈ ಸ್ಪಷ್ಟನೆ ನೀಡಿದ್ದಾರೆ.
