ಮುಂದಿನ ಸಿಎಂ ನಾನೇ ಆಗುತ್ತೇನೆ : ಇಂಧನ ಸಚಿವ ಡಿ.ಕೆ. ಶಿವಕುಮಾರ್

ನೆಲಮಂಗಲ(ಆ.23): ಮಾಗಡಿ ತಾಲೂಕಿನ ಜನರು ಆಸೆ ಪಟ್ಟರೆ ಹಾಗೂ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಮಾಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕನನ್ನು ಗೆಲ್ಲಿಸಿದರೆ ಮುಂದಿನ ಸಿಎಂ ನಾನೇ ಆಗುತ್ತೇನೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನೆಲಮಂಗಲ ತಾಲೂಕಿನ ಹಾಲಿಡೇ ಫಾಮ್ಸ್ ಹೋಟೆಲ್ ನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್‌ಗೆ ಬಂದ ಕೇವಲ 3 ವರ್ಷದಲ್ಲಿ ಮುಖ್ಯಮಂತ್ರಿಯಾದರು ಎಂದು ತಿಳಿಸಿದರು.