ಇನ್ನೇನು  ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ತಾವು ಬೆಂಗಳೂರಿನಿಂದಲೇ ನಿಲ್ಲಬೇಕೆಂದು ನಿಶ್ಚಯ ಮಾಡಿದ್ದೇನೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದರು. 

ಮಂಗಳೂರು: ಕರಾವಳಿ ಜನರು ನನ್ನನ್ನು ಶಾಸಕ, ಸಂಸದ, ಮುಖ್ಯಮಂತ್ರಿ ಮಾಡಿದ್ದರಿಂದ ಈಗ ಬೆಂಗಳೂರಿಗೆ ತಲುಪಿದ್ದೇನೆ. ಹಾಗಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನಿಂದಲೇ ನಿಲ್ಲಬೇಕೆಂದು ನಿಶ್ಚಯ ಮಾಡಿದ್ದೇನೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ಸಚಿವರು, ಕಳೆದ ಬಾರಿ 282 ಸ್ಥಾನ ಪಡೆದಿದ್ದ ಬಿಜೆಪಿ, ಈ ಬಾರಿ 300 ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಉರುಳಲಿದೆ. ಇದನ್ನು ಹೇಳಲು ಯಾವ ಜ್ಯೋತಿಷ್ಯದ ಅಗತ್ಯವಿಲ್ಲ ಎಂದರು.