ಸಾಮಾನ್ಯವಾಗಿ ಪಕ್ಷದ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಚುನಾವಣೆ ಈ ಬಾರಿ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಮೈಸೂರು: ಸಾಮಾನ್ಯವಾಗಿ ಪಕ್ಷದ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಚುನಾವಣೆ ಈ ಬಾರಿ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಬುಧವಾರ ಹುಣಸೂರು ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಅವರು, ಕುರುಬರೆಲ್ಲರೂ ಹಾಲಿ ಶಾಸಕ ಎಚ್.ಪಿ. ಮಂಜುನಾಥ್‌ಗೆ ಮತ ಹಾಕಬೇಕು. ನನ್ನ ಬಗ್ಗೆ ಯಾರೇ ಮಾತನಾಡಿದರೂ ತಲೆ ಕೆಡಸಿಕೊಳ್ಳಬೇಡಿ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್‌ಗೆ ತಿರುಗೇಟು ನೀಡಿದರು.