ಬಿಜೆಪಿ ಮುಖಂಡ ಹಾಗೂ ಶಾಸಕ ಇದೀಗ ಪಕ್ಷವನ್ನು ತೊರೆದು ಜೆಡಿಎಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಡಿದ್ದು ಈ ಸಂಬಂಧ ಅವರೇ ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪಅವರನ್ನು ಭೇಟಿ ಮಾಡಿದ ಬಳಿಕ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಾವು ಜೆಡಿಎಸ್ ಗೆ ಸೇರ್ಪಡೆಯಾಗುತ್ತಿರುವುದು ಶುದ್ಧ ಸುಳ್ಳು ಎಂದು ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಾವು ಜೆಡಿಎಸ್ ಗೆ ಹೋಗುವುದಾಗಿ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನು ಬಿ.ಎಸ್ ಯಡಿಯೂರಪ್ಪ ಅವರೂ ಕೂಡ ತಮಗೆ ಹೇಳಿದರು. ಆದರೆ ನಾನು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತ. ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವುದಿಲ್ಲ. ಬಿಜೆಪಿಯನ್ನು ಬಿಟ್ಟು ಬೇರೆಡೆ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ. 

ಅಲ್ಲದೇ ಬಿಜೆಪಿ ಸರ್ಕಾರ ರಚನೆ ಮಾಡುವ ಬಗ್ಗೆ ನನಗೇನೂ ಗೊತ್ತಿಲ್ಲ. ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಆಗ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡಬಹುದು. ಮೊದಲು ಸರ್ಕಾರ ರಚನೆಯಾಗಲಿ. ನಂತರ ಈ ಬಗ್ಗೆ ಚಿಂತನೆ ನಡೆಸೋಣ ಎಂದು ಅವರು ಹೇಳಿದ್ದಾರೆ.