ಇನ್ನು ಮುಂದೆ ನಾನು ಯಾವ ಕಾರಣಕ್ಕೂ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಈ ನಿರ್ಧಾರ ಅಚಲ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು : ಇನ್ನು ಮುಂದೆ ನಾನು ಯಾವ ಕಾರಣಕ್ಕೂ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಈ ನಿರ್ಧಾರ ಅಚಲ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಿದ ಬಳಿಕ ದೆಹಲಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ರಾಜಕಾರಣ ನನಗೆ ಬೇಡ. ಆದರೆ ರಾಜಕಾರಣದಲ್ಲಿ ಸಕ್ರಿಯನಾಗಿರುತ್ತೇನೆ. ಪಕ್ಷ ಸಂಘಟನೆಯಲ್ಲಿ ತೊಡಗುತ್ತೇನೆ ಎಂದರು. 

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿ ಕೊಳ್ಳುವ ನಿರ್ಧಾರವನ್ನು ಸ್ಥಳೀಯ ಘಟಕಗಳಿಗೆ ನೀಡಲಾಗಿದೆ. ಸ್ಥಳೀಯ ನಾಯಕರು ತಮ್ಮಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಜೆಡಿಎಸ್ ಅಥವಾ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿವೆ ಎಂದು ಹೇಳಿದರು.