ಲೋಕಸಭೆಗೆ ಸ್ಪರ್ಧಿಸುತ್ತಾರಾ ಯದುವೀರ್ ಒಡೆಯರ್ ..?

https://static.asianetnews.com/images/authors/b348a094-0bef-5801-a1f6-61e57071185f.jpg
First Published 11, Jul 2018, 10:41 AM IST
I will not contest Lok Sabha elections: Yaduveer
Highlights

ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಇಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಈ ವಿಷಯ ಪ್ರಸ್ತಾಪವಾಗಿತ್ತು. ಚುನಾವಣೆ ಸ್ಪರ್ಧಿಸುವ ವಿಚಾರದಲ್ಲಿ ಇನ್ನೂ ನಿರ್ಧಾರ ಕೈಗೊಂಡಿಲ್ಲ. 

ಮುಂದೆ ಯಾವ ರೀತಿ ಆಗುತ್ತೆ ನೋಡಬೇಕು. ನನಗೆ ನನ್ನದೇ ಆದ ವಿಚಾರಗಳಿವೆ. ನಮ್ಮ ಅಮ್ಮ ಅವರು ಕೆಲವು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ನೋಡಬೇಕಿದೆ. ರಾಜಕೀಯ ಪ್ರವೇಶ ಮಾಡುವ ಸಂದರ್ಭದಲ್ಲಿ ಎಲ್ಲವನ್ನು ತಮ್ಮ ಮುಂದೆಯೇ ಹೇಳುವೆ ಎಂದು ತಿಳಿಸಿದರು.

loader