ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ: ಶ್ರೀರಾಮುಲು

I will not contest Loksabha Election 2019 says Sriramulu
Highlights

ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವುದು ನನ್ನ ಮೂಲ ಉದ್ದೇಶ. ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದ್ದೇನೆ. ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಯಾವ ಸಂಸದರನ್ನು ಮುಂದುವರಿಸಬೇಕು. ಯಾರನ್ನು ಹೊಸದಾಗಿ ಕಣಕ್ಕಿಳಿಸಬೇಕು ಎಂಬ ಅಂತಿಮ ಚರ್ಚೆ ಪಕ್ಷದ ಆಂತರಿಕ ವಲಯದಲ್ಲಿ ನಡೆಯುತ್ತಿದೆ. ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಚುನಾವಣೆಯಲ್ಲಿ ಒಂದಾದರೂ ಈ ಬಾರಿಯೂ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ. 

ಮಂಡ್ಯ (ಜು. 10):  ನಾನು ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಶಾಸಕನಾಗಿ ಮುಂದುವರೆಯುತ್ತೇನೆ ಎಂದು ಶಾಸಕ ಬಿ.ಶ್ರೀರಾಮುಲು  ಸ್ಪಷ್ಟಪಡಿಸಿದ್ದಾರೆ.  ಲೋಕಸಭಾ ಸದಸ್ಯನಾಗಿದ್ದ ನನಗೆ ಪಕ್ಷ ಶಾಸಕನಾಗೋ ಅವಕಾಶ ಕೊಟ್ಟಿದೆ. ರಾಜ್ಯ ಸರ್ಕಾರದ ಆಡಳಿತ ಗಮನಿಸಿ ವಿರೋಧ ಪಕ್ಷದಲ್ಲೇ ಕುಳಿತು ಹೋರಾಟ ಮಾಡುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವುದು ನನ್ನ ಮೂಲ ಉದ್ದೇಶ. ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದ್ದೇನೆ. ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಯಾವ ಸಂಸದರನ್ನು ಮುಂದುವರಿಸಬೇಕು. ಯಾರನ್ನು ಹೊಸದಾಗಿ ಕಣಕ್ಕಿಳಿಸಬೇಕು ಎಂಬ ಅಂತಿಮ ಚರ್ಚೆ ಪಕ್ಷದ ಆಂತರಿಕ ವಲಯದಲ್ಲಿ ನಡೆಯುತ್ತಿದೆ. ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಚುನಾವಣೆಯಲ್ಲಿ ಒಂದಾದರೂ ಈ ಬಾರಿಯೂ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದರು.

ದೇವೇಗೌಡರು ಪ್ರಧಾನಿಯಾಗಲ್ಲ 

ದೇಶದಲ್ಲಿ ಈಗಾಗಲೇ ತೃತೀಯ ರಂಗ ಸಂಘಟನೆಯಾಗಿದೆ. ಈ ನಾಯಕರು ಏನೇ ಮಾಡಿದರೂ ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ. ಎಚ್‌.ಡಿ.ದೇವೇಗೌಡರು ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ. 2019ರಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ: ಇದೇ ವೇಳೆ ಸಮ್ಮಿಶ್ರ ಸರ್ಕಾರದ ಬಜೆಟ್‌ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮಾತೋಲನೆ ಎದ್ದು ಕಾಣುತ್ತಿದೆ. ಇದು ರಾಜ್ಯ ಬಜೆಚ್‌ ಅಲ್ಲ. ಉತ್ತರ ಕರ್ನಾಟಕ, ಕರಾವಳಿ, ಹಳೆ ಮೈಸೂರು, ಮಲೆನಾಡು ಎಂದು ವಿಂಗಡಿಸಿ ತಾರತಮ್ಯ ಮಾಡಲಾಗಿದೆ. ಅಣ್ಣ-ತಮ್ಮಂದಿರ ಬಜೆಚ್‌ ನಲ್ಲಿ ಎಲ್ಲಾ ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ದೂರಿದರು.
 

loader