ಆಪರೇಷನ್ ಕಮಲದ ಊಹಾಪೋಹಗಳು ವ್ಯಾಪಕವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಾಗವಾಡ ಕ್ಷೇತ್ರ ಶಾಸಕ ಶ್ರೀಮಂತ ಪಾಟೀಲ ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ ಎಂದು ಹೇಳಿದ್ದಾರೆ. 

ಕಾಗವಾಡ: ರಾಜ್ಯದಲ್ಲಿ ಆಪರೇಷನ್ ಕಮಲದ ಊಹಾಪೋಹಗಳು ವ್ಯಾಪಕವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಾಗವಾಡ ಕ್ಷೇತ್ರ ಶಾಸಕ ಶ್ರೀಮಂತ ಪಾಟೀಲ, ಸಾವಿರಾರು ಕೋಟಿ ರುಪಾಯಿ ನೀಡಿದರೂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದು ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶುಕ್ರವಾರ ಕೆಂಪವಾಡದ ಶಾಸಕರ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೆಲ ಶಾಸಕರು ಪಕ್ಷ ತೊರೆಯುದ ಬಗ್ಗೆ ವದಂತಿ ಹರಡು ತ್ತಿದ್ದು, ನನ್ನ ಹೆಸರನ್ನು ಅನವಶ್ಯಕವಾಗಿ ಎಳೆದು ತರಲಾಗಿದೆ ಎಂದರು. 

ಕೆಲ ದಿನಗಳಿಂದ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದು ಹೇಳುತ್ತಿದ್ದಾರೆ. ಅದರಲ್ಲಿ ನನ್ನ ಹೆಸರು ಬಳಸಿ, ನಾನು ಪಕ್ಷ ತೊರೆಯುತ್ತೇನೆ ಎಂದು ಹೇಳುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದರು.