ಅಥಣಿ :  ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ ಅವರ ಕಟ್ಟಾ ಬೆಂಬಲಿಗರು ಎಂದು ಗುರುತಿಸಿಕೊಂಡಿದ್ದ ಅಥಣಿ ಶಾಸಕ ಮಹೇಶ್‌ ಕುಮಠಳ್ಳಿ ಕಾಂಗ್ರೆಸ್‌ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಯಾವ ಕಾರಣಕ್ಕೂ ಕಾಂಗ್ರೆಸ್‌ ಪಕ್ಷವನ್ನು ಬಿಡುವುದಿಲ್ಲ. ಜಾರಕಿಹೊಳಿ ಸಹೋದರರು ನನಗೆ ಮಾರ್ಗದರ್ಶಕರು ಎಂಬುದು ಸತ್ಯ. ಆದರೆ, ನಾನು ಕಾಂಗ್ರೆಸ್‌ ಪಕ್ಷ ಬಿಡುವುದಿಲ್ಲ. 

ಐದು ವರ್ಷಗಳ ಕಾಲ ಶಾಸಕನಾಗಿ ಕೆಲಸ ಮಾಡುವೆ. ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ನಡೆಯಲಿದೆ ಎಂದರು.

ಕಳೆದ ನಾಲ್ಕೈದು ತಿಂಗಳಿಂದ ರಮೇಶ್‌ ಜಾರಕಿಹೊಳಿ ಭಿನ್ನಮತ ಚಟುವಟಿಕೆಯಲ್ಲಿ ತೊಡಗಿ ರೆಸಾರ್ಟ್‌ ರಾಜಕಾರಣ ಮಾಡಿದಾಗ ಜಿಲ್ಲೆಯಲ್ಲಿ ಅವರ ಬೆನ್ನಿಗೆ ನಿಂತ ಏಕೈಕ ಶಾಸಕ ಮಹೇಶ್‌ ಕುಮಠಳ್ಳಿ ಮಾತ್ರ. 

ದೀರ್ಘ ಕಾಲ ಅವರ ಜೊತೆ ಬಾಂಬೆಯಲ್ಲೇ ತಂಗಿದ್ದರು. ಆ ಸಂದರ್ಭದಲ್ಲಿ ಸ್ವಂತ ಕಾರ್ಯಕರ್ತರು ಸೇರಿದಂತೆ ತಮ್ಮ ಕ್ಷೇತ್ರದ ಮತದಾರರಿಂದ ಅನೇಕ ವಿರೋಧಗಳು ವ್ಯಕ್ತವಾಗಿದ್ದವು. ಅಲ್ಲದೆ, ಅವರೂ ರಾಜೀನಾಮೆ ಸಲ್ಲಿಸುತ್ತಾರೆ ಎಂಬು ಮಾತು ಕೇಳಿಬಂದಿತ್ತು.