ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಕಲಹ ಸದ್ಯ ತಣ್ಣಗಾದಂತೆ ಕಂಡು ಬಂದಿದ್ದು ಇದೀಗ ಬೂದಿ ಮುಚ್ಚಿದಂತೆ ಇದೆ. ಇದೇ ವೇಳೆ ರಮೇಶ್ ಜಾರಕಿಹೊಳಿ ಅವರು ಹೊಸ ಬಾಂಬ್ ಒಂದನ್ನು ಹಾಕಿದ್ದಾರೆ. 

ಬೆಳಗಾವಿ:  ಸದ್ಯ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಕದನ ತಣ್ಣಗಾದಂತೆ ಕಂಡು ಬಂದಿದ್ದು ಬೂದಿ ಮುಚ್ಚಿದ ಕೆಂಡದಂತೆ ಇದೆ. ಇದೇ ವೇಳೆ ಜಾರಕಿಹೊಳಿ ಸಹೋದರರನ್ನು ಸೆಳೆಯಲು ಬಿಜೆಪಿ ಪ್ಲಾನ್ ಮಾಡುತ್ತಿದೆ ಎನ್ನುವ ವಿಚಾರದ ಕೇಳಿ ಬಂದಿದ್ದು, ಇದೀಗ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಹಾಕಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಹೋದರ ಸತೀಶ್ ಜಾರಕಿಹೊಳಿ ರಾಜ್ಯದ ಮುಖ್ಯಮಂತ್ರಿ ಪಟ್ಟಕ್ಕೇರುವ ತನಕ ತಾವು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ ಎಂದು ಪೌರಾಡಳಿತ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. 

ಗೋಕಾಕದ ತಮ್ಮ ನಿವಾಸದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಕುಟುಂಬ ಮೊದಲಿನಿಂದಲೂ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿದೆ. ಹೀಗಾಗಿ ಪಕ್ಷದಲ್ಲಿಯೇ ಕೆಲವು ಕಾಣದ “ಕೈ “ಗಳು ನಮ್ಮ ಕುಟುಂಬದ ವಿರುದ್ಧ ಪಿತೂರಿ ನಡೆಸಿವೆ ಎಂದು ಗಂಭೀರ ಆರೋಪ ಮಾಡಿದರು.