ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ'ಕೋರ್ಟ್ ಮರು ತನಿಖೆಯ ಆದೇಶದ ಹಿನ್ನಲೆಯಲ್ಲಿ ತನಿಖೆ ಆರಂಭಿಸಿದ್ದ ಲೋಕಾಯುಕ್ತ ಎಸ್'ಐಟಿ ಅಧಿಕಾರಿಗಳು ಗಂಗಾರಾಮ್ ಬಡೇರಿಯಾ ಅವರನ್ನು ಬಂಧಿಸಲಾಗಿದೆ.

ಬೆಂಗಳೂರು(ಮೇ.15): ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿಯಾದ ರಾಜ್ಯ ಕಂದಾಯ ವಿಭಾಗದ ಕಾರ್ಯದರ್ಶಿಯಾಗಿರುವ ಗಂಗಾರಾಮ್ ಬಡೇರಿಯಾ ಅವರನ್ನು ಲೋಕಾಯುಕ್ತ ಎಸ್'ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ'ಕೋರ್ಟ್ ಮರು ತನಿಖೆಯ ಆದೇಶದ ಹಿನ್ನಲೆಯಲ್ಲಿ ತನಿಖೆ ಆರಂಭಿಸಿದ್ದ ಲೋಕಾಯುಕ್ತ ಎಸ್'ಐಟಿ ಅಧಿಕಾರಿಗಳು ಗಂಗಾರಾಮ್ ಬಡೇರಿಯಾ ಅವರನ್ನು ಬಂಧಿಸಲಾಗಿದೆ. ಸೇವೆಯಲ್ಲಿದ್ದಾಗಲೆ ಬಂಧನಕ್ಕೆ ಒಳಗಾದ ಮೊದಲ ಐಎಎಸ್ ಅಧಿಕಾರಿ ಇವರಾಗಿದ್ದಾರೆ. ಇವರು ಬಳ್ಳಾರಿ ಜಿಲ್ಲೆಯಲ್ಲಿ ಅರಣ್ಯಾಧಿಕಾರಿಯಾಗಿದ್ದಾಗ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವ ಆರೋಪದ ಹಿನ್ನಲೆಯಲ್ಲಿ ಬಂಧಿಸಲಾಗಿದೆ.

ಹೆಚ್.ಡಿ. ಕುಮಾರ'ಸ್ವಾಮಿ ಹಾಗೂ ಧರ್ಮ ಸಿಂಗ್ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಳ್ಳಾರಿಯ ಜಂತಕಲ್ ಮೈನಿಂಗ್ ಅಕ್ರಮ ಗಣಿಕಾರಿಕೆಗೆ ಸಹಕಾರ ನೀಡಿರುವ ಆರೋಪ ಇವರ ಮೇಲಿದೆ.

ಈ ಪ್ರಕರಣವನ್ನು ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್'ಗೆ ಮನವಿ ಸಲ್ಲಿಸಿದ್ದರು. ಆದರೆ ಕೋರ್ಟ್' ಮನವಿಯನ್ನು ಪುರಸ್ಕರಿಸಿರಲಿಲ್ಲ. ಚೀನಾಗೆ ಹೋಗುತ್ತಿದ್ದ ಗಣಿಯನ್ನು ತಡಿಯದೆ ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಿದ್ದಾರೆ ಎನ್ನುವುದು ಪ್ರಮುಖ ಆರೋಪವಾಗಿದೆ. ಗಂಗಾರಾಮ್ ಬಡೇರಿಯಾ ಬಂಧನ ಭ್ರಷ್ಟ ಅಧಿಕಾರಿಗಳಿಗೆ ಎಚ್ಚರಿಕೆಯ ಕರೆಗಂಟೆ ಎಂದೆ ಹೇಳಬಹುದು. ಈ ಪ್ರಕರಣವೂ ಮಾಜಿ ಸಿಎಂ'ಗಳಾದ ಕುಮಾರಸ್ವಾಮಿ ಹಾಗೂ ಧರ್ಮ'ಸಿಂಗ್ ಅವರಿಗೆ ತೊಂದರೆಯಾಗುವ ಸಾಧ್ಯತೆಯಿದೆ.