ಕಾರವಾರ[ಸೆ.09]: ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್‌ ತಮ್ಮ ಬೆಂಬಲಿಗರೊಂದಿಗೆ ಮೊದಲು ಪಾಕಿಸ್ತಾನಕ್ಕೆ ಹೋಗಲಿ ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ್‌ ಹೆಗಡೆ ಕಿಡಿಕಾರಿದ್ದಾರೆ.

ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿರುವುದಕ್ಕೆ ಸಸಿಕಾಂತ ಸೆಂಥಿಲ್‌ ಕೊಟ್ಟಿರುವ ಕಾರಣದ ಕುರಿತು ಟ್ವೀಟ್‌ ಮಾಡಿರುವ ಹೆಗಡೆ, ಆತ ಮಾಡಬೇಕಿರುವ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು. ಇದು ಪ್ರಾಯೋಗಿಕವಾಗಿಯೂ ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು. ಇದರಲ್ಲಾದರೂ ನಿಯತ್ತು ತೋರಿಸಲಿ ಎಂದು ಚಾಟಿ ಬೀಸಿದ್ದಾರೆ.