ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ನಿನ್ನೆ ತಡರಾತ್ರಿ ರಹಸ್ಯ ಸಭೆ ನಡೆದಿದೆ ಎನ್ನುವ ಎಕ್ಸ್​ಕ್ಲೂಸಿವ್ ಮಾಹಿತಿ ಸುವರ್ಣ ನ್ಯೂಸ್​'ಗೆ ಲಭ್ಯವಾಗಿದೆ. ಸಭೆಯಲ್ಲಿ ಮುಂಬರುವ ಚುನಾವಣೆ ದೃಷ್ಟಿಯಿಂದ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರು(ಜು.04): ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ನಿನ್ನೆ ತಡರಾತ್ರಿ ರಹಸ್ಯ ಸಭೆ ನಡೆದಿದೆ ಎನ್ನುವ ಎಕ್ಸ್​ಕ್ಲೂಸಿವ್ ಮಾಹಿತಿ ಸುವರ್ಣ ನ್ಯೂಸ್​'ಗೆ ಲಭ್ಯವಾಗಿದೆ. ಸಭೆಯಲ್ಲಿ ಮುಂಬರುವ ಚುನಾವಣೆ ದೃಷ್ಟಿಯಿಂದ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ರಾತ್ರಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್. ಪಾಟೀಲ್ ಹಾಗೂ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಭಾವಿ ಮುಖಂಡರು ಭಾಗಿಯಾಗಿದ್ದರು ಎನ್ನಲಾಗಿದೆ. ಹಾಲಿ ಶಾಸಕರು ಹಾಗೂ ಚುನಾವಣೆಗೆ ಸ್ಪರ್ಧಿಸುವಂತವರಿಗೆ, KPCC ಪದಾಧಿಕಾರಿ ಹಾಗೂ ಹಾಗೂ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡದಿರಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನು ಇದೇ ಸಂದರ್ಭ 10 ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ತೀರ್ಮಾನಿಸಲಾಗಿದ್ದು, ಶೀಘ್ರದಲ್ಲೇ KPCC ಪದಾಧಿಕಾರಿಗಳ ಆಯ್ಕೆ ಅಂತಿಮಗೊಳಿಸಲು ನಿರ್ಧರಿಸಲಾಗಿದೆ. ಆಗಸ್ಟ್ ತಿಂಗಳ ಅಂತ್ಯದೊಳಗೆ ಬ್ಲಾಕ್ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಾವೇಶಗಳನ್ನ ಆಯೋಜಿಸಲು ನಿರ್ಧರಿಸಲಾಗಿದೆ ಎನ್ನುವ ಮಾಹಿತಿ ಸುವರ್ಣ ನ್ಯೂಸ್​'ಗೆ ಉನ್ನತ ಮೂಲಗಳಿಂದ ಲಭ್ಯವಾಗಿದೆ.