‘‘ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿದರೆ ಇಡೀ ರಾಜ್ಯಕ್ಕೆ ಬೆಂಕಿ ಹಚ್ಕೊಳ್ಳುತ್ತೆ’’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಇತ್ತೀಚೆಗೆ ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ದ.ಕ. ಜಿಲ್ಲೆಯ ಉಸ್ತುವಾರಿ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಭದ್ರತಾ ಸಲಹೆಗಾರ ಕೆಂಪಯ್ಯ ಅವರಿಗೆ ಸಿದ್ದರಾಮಯ್ಯ ಹೇಳಿದ್ದಾರೆ. ವಿಶೇಷವಾಗಿ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸುವ ಪ್ರಯತ್ನದಲ್ಲಿದ್ದಾರೆ. ಅವರನ್ನೇನಾದರೂ ಮುಟ್ಟಿದರೆ ಇಡೀ ರಾಜ್ಯಕ್ಕೆ ಬೆಂಕಿ ಹತ್ಕೊಳ್ಳುತ್ತೆ. ಅದರ ಪರಿಣಾಮ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಮುಖ್ಯಮಂತ್ರಿಯೇ ನೇರ ಜವಾಬ್ದಾರರಾಗುತ್ತಾರೆ ಎಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.

ಮಂಗಳೂರು (ಜು.13): ‘‘ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿದರೆ ಇಡೀ ರಾಜ್ಯಕ್ಕೆ ಬೆಂಕಿ ಹಚ್ಕೊಳ್ಳುತ್ತೆ’’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ದ.ಕ. ಜಿಲ್ಲೆಯ ಉಸ್ತುವಾರಿ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಭದ್ರತಾ ಸಲಹೆಗಾರ ಕೆಂಪಯ್ಯ ಅವರಿಗೆ ಸಿದ್ದರಾಮಯ್ಯ ಹೇಳಿದ್ದಾರೆ. ವಿಶೇಷವಾಗಿ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸುವ ಪ್ರಯತ್ನದಲ್ಲಿದ್ದಾರೆ. ಅವರನ್ನೇನಾದರೂ ಮುಟ್ಟಿದರೆ ಇಡೀ ರಾಜ್ಯಕ್ಕೆ ಬೆಂಕಿ ಹತ್ಕೊಳ್ಳುತ್ತೆ. ಅದರ ಪರಿಣಾಮ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಮುಖ್ಯಮಂತ್ರಿಯೇ ನೇರ ಜವಾಬ್ದಾರರಾಗುತ್ತಾರೆ ಎಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ರಾ.ತನಿಖಾ ತಂಡಕ್ಕೆ ನೀಡಿ: ಜಿಲ್ಲೆಯಲ್ಲಿ ನಡೆದ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಕೊಲೆಗಳಲ್ಲಿ ಕೆಎಫ್‌ಡಿ ಕೈವಾಡವಿದೆ. ರಾಜ್ಯ ಸರ್ಕಾರ ನಿಜವಾದ ಅಪರಾಧಿಗಳನ್ನು ಬಂಧಿಸದೆ ಕೊಲೆಗಡುಕರಿಗೆ ರಕ್ಷಣೆ ನೀಡುತ್ತಿದೆ. ಸರ್ಕಾರವು ಪೊಲೀಸ್ ಇಲಾಖೆ ಮೇಲೆ ಒತ್ತಡ ಹಾಕಿ ಗಲಭೆಗೆ ಸಂಬಂಧ ಇಲ್ಲದ ಹಿಂದೂ ಸಂಘಟನೆಗಳ ನಾಯಕರನ್ನು ಬಂಧಿಸಿ ಕಾನೂನು ಕೈಗೆ ತೆಗೆದುಕೊಂಡಿದೆ. ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ರಾಷ್ಟ್ರೀಯ ತನಿಖಾ ದಳ ನೇಮಕ ಮಾಡುವಂತೆ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಕೇಂದ್ರದ ಗಮನ ಸೆಳೆಯಲಾಗುವುದು ಎಂದರು. ಕಾಂಗ್ರೆಸ್ ಸರ್ಕಾರದ ಅವಧಿ ಇನ್ನು ಕೇವಲ 8-9 ತಿಂಗಳು ಮಾತ್ರ. ಆದ್ದರಿಂದ ಪೊಲೀಸ್ ಅಧಿಕಾರಿಗಳು ಸರ್ಕಾರದ ಬೆದರಿಕೆಗೆ ಮಣಿಯಬಾರದು. ಪ್ರಾಮಾಣಿಕವಾಗಿ ಕೆಲಸ ಮಾಡಿ ಬಿಎಸ್‌ವೈ ಸಲಹೆ ನೀಡಿದರು.
ಮಂಗಳೂರಲ್ಲಿ ಸತ್ಯಾಗ್ರಹ: ಶರತ್ ಕೊಲೆ ಬಳಿಕದ ಗಲಭೆ ಹಿನ್ನೆಲೆಯಲ್ಲಿ ಬಿಜೆಪಿ, ಆರೆಸ್ಸೆಸ್ ನಾಯಕರ ಮನೆಗೆ ದಾಳಿ ನಡೆಸಿ ಕಿರುಕುಳ ನೀಡುವುದನ್ನು ನಿಲ್ಲಿಸದಿದ್ದರೆ ೩-೪ ದಿನದೊಳಗೆ ಸಂಸತ್ತಿನ ಒಪ್ಪಿಗೆ ಪಡೆದು ಶೋಭಾ ಕರಂದ್ಲಾಜೆ, ನಾನು, ನಳಿನ್ ಕುಮಾರ್ ಕಟೀಲು ಮೂವರೂ ಮಂಗಳೂರಿಗೆ ಬಂದು ಇಲ್ಲೇ ಸತ್ಯಾಗ್ರಹ ನಡೆಸುತ್ತೇವೆ ಎಂದು ಎಚ್ಚರಿಸಿದರು. ಜಿಲ್ಲೆಯಲ್ಲಿ ಶಾಂತಿ ನೆಲೆಸಬೇಕಾದರೆ ದ.ಕ. ಜಿಲ್ಲೆಯಲ್ಲಿ ಶಾಂತಿ ಕದಡುತ್ತಿರುವ ಪಿಎಫ್‌ಐ, ಎಸ್‌ಡಿಪಿಐ, ಕೆಎಫ್‌ಡಿ ಸಂಘಟನೆಗಳನ್ನು ಈ ಕೂಡಲೆ ನಿಷೇಧ ಮಾಡಬೇಕು. ಪೊಲೀಸ್ ಅಧಿಕಾರಿಗಳಿಗೆ ಮುಕ್ತ ವಾತಾವರಣ ಮಾಡಿಕೊಡಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು.