ರಾಜ್ಯ ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳ ತಿಕ್ಕಾಟದಿಂದ ನಿತ್ಯ ಜನರು ಸಂಕಷ್ಟ ಅನುಭವಿಸುವಂತಾಗಿದೆ.
ಬೆಂಗಳೂರು(ನ.15): ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕವನ್ನು ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ರದ್ದು ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಿಗೆ ಮಾರಕವಾಗಿರುವ ಈ ವಿಧೇಯಕವನ್ನು ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ರದ್ದು ಮಾಡುತ್ತದೆ ಎಂದು ಹೇಳಿದರು. ರಾಜ್ಯ ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳ ತಿಕ್ಕಾಟದಿಂದ ನಿತ್ಯ ಜನರು ಸಂಕಷ್ಟ ಅನುಭವಿಸುವಂತಾಗಿದೆ. ಸರಕಾರ ಕೂಡಲೇ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಮೂರು ತಿಂಗಳು ಈ ಕಾಯ್ದೆ ಜಾರಿ ಆಗದಂತೆ ತಡೆಯಿರಿ. ನಂತರ ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
