'ಬಿಜೆಪಿ ಗೆದ್ದರೆ ನಾನೂ ಸಚಿವ ಸ್ಥಾನದ ಆಕಾಂಕ್ಷಿ'
ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನ ಭೀತಿ| ಬಿಜೆಪಿ ಗೆದ್ದರೆ ನಾನೂ ಸಚಿವ ಸ್ಥಾನದ ಆಕಾಂಕ್ಷಿ: ತಿಪ್ಪಾರೆಡ್ಡಿ|
ಚಿತ್ರದುರ್ಗ[ಜು.22]: ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನ ಭೀತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪ್ರತಿಪಕ್ಷ ಬಿಜೆಪಿ ಮುಖಂಡರಲ್ಲಿ ಮಂತ್ರಿಗಿರಿ ಲೆಕ್ಕಾಚಾರಗಳು ಬಿರುಸಾಗಿ ನಡೆಯುತ್ತಿವೆ. ಸಮ್ಮಿಶ್ರ ಸರ್ಕಾರ ಅಧಿಕಾರ ಕಳೆದುಕೊಂಡು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ತಾವು ಸಚಿವ ಸ್ಥಾನದ ಆಕಾಂಕ್ಷಿ. ವರಿಷ್ಠರು ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಐವರು ಬಿಜೆಪಿ ಶಾಸಕರಿದ್ದು ಅವರಲ್ಲಿ ನಾನೇ ಹಿರಿಯ ಶಾಸಕನಾನಾಗಿದ್ದೇನೆ. ರಾಜ್ಯದ ಬಿಜೆಪಿ ಹಿರಿಯ ಶಾಸಕರ ಪಟ್ಟಿಯಲ್ಲಿಯೂ ನಾನಿದ್ದೇನೆ ಎಂದು ಹೇಳಿದರು.
ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಜಿಲ್ಲೆಯಲ್ಲಿ ಹೆಚ್ಚು ಬಾರಿ ಗೆದ್ದು ವಿಧಾನಸಭೆಗೆ ಹೋಗಿದ್ದೇನೆ. ಕಳೆದ 15-20ವರ್ಷಗಳಿಂದ ಹೊರ ಜಿಲ್ಲೆಯವರೇ ಜಿಲ್ಲೆ ಮಂತ್ರಿಗಳಾಗಿದ್ದಾರೆ. ಇದರಿಂದ ಜಿಲ್ಲೆಯೂ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ಜಿಲ್ಲೆಯವರು ಮಂತ್ರಿಗಳಾಗಬೇಕು ಎನ್ನುವ ಕೂಗು ಜನರಲ್ಲಿದೆ. ಹೀಗಾಗಿ ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ವರಿಷ್ಠರು ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಇಂಗಿತ ವ್ಯಕ್ತಪಡಿಸಿದ್ದಾರೆ.