ಬೆಂಗಳೂರು(ಸೆ.19): ದೆಹಲಿಯಲ್ಲಿ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ತಮಿಳುನಾಡಿಗೆ ನೀರು ಬಿಟ್ಟರೆ ಸಿಎಂ ಕುರ್ಚಿ ಉಳಿಯಲ್ಲ. ತಮಿಳುನಾಡಿಗೆ ನೀರು ಬಿಡಲು ಸಾಧ್ಯ ಇಲ್ಲ ಎಂದು ಹೇಳಬೇಕು. ಸಿಎಂ ಜೈಲಿಗೆ ಹೋದರೆ ನಾವೂ ಕೂಡ ಜೈಲಿಗೆ ಬರುತ್ತೇವೆ. ಸಿಎಂ ರಾಜೀನಾಮೆ ಕೊಟ್ಟರೆ ನಾವೂ ಕೊಡುತ್ತೇವೆ ಎಂದು ಹೇಳಿದ್ದಾರೆ.
