ವಿಶ್ವವಿಖ್ಯಾತ ಬೇಲೂರು ಶ್ರೀ ಚನ್ನಕೇಶವಸ್ವಾಮಿ ದೇಗುಲಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನವರು ಏನು ಹೇಳಿದ್ದರೋ ಅದನ್ನು ಮೊದಲು ಮಾಡಬೇಕು ಎಂದು ಆಗ್ರಹಿಸಿದರು.

ಬೇಲೂರು(ಮೇ.31]: ಚುನಾವಣೆ ಪೂರ್ವದಲ್ಲಿ ಜನರಿಗೆ ಕೊಟ್ಟಮಾತಿನಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಮಾಡದಿದ್ದರೆ ಸಂಪುಟ ವಿಸ್ತರಣೆ ಆಗುವುದರೊಳಗೆ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಶ್ವವಿಖ್ಯಾತ ಬೇಲೂರು ಶ್ರೀ ಚನ್ನಕೇಶವಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನವರು ಏನು ಹೇಳಿದ್ದರೋ ಅದನ್ನು ಮೊದಲು ಮಾಡಬೇಕು ಎಂದು ಆಗ್ರಹಿಸಿದರು. 15 ದಿನಗಳ ಕಾಲಾವಕಾಶವನ್ನು ಸಾಲಮನ್ನಾ ಮಾಡಲು ಮುಖ್ಯಮಂತ್ರಿಗಳು ಕೇಳಿದ್ದು ಏನು ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಸಂಪುಟ ವಿಸ್ತರಣೆ ಆಗುವ ಮುಂಚೆಯೇ ಸರ್ಕಾರ ಪತನಗೊಳ್ಳಬಾರದು ಎಂದರೆ ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಕೆ.ಎಸ್ ಈಶ್ವರಪ್ಪ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಪ್ರಸನ್ನಕುಮಾರ್ ಅವರನ್ನು ಮಣಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ.