ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಅನಂತ್ ಕುಮಾರ್ ಹೆಗಡೆ ಸಚಿವ ಸಂಪುಟ ಸಹೊದ್ಯೋಗಿ ರಾಮ್'ದಾಸ್ ಆಥಾವಾಲೆ ಮಾತಿನ ತಿರುಗೇಟು ನೀಡಿದ್ದಾರೆ. ಯಾರಾದರೂ ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸಿದರೆ ನಾನವರನ್ನು ಬದಲಾಯಿಸುತ್ತೇವೆ ಎಂದು ಟಾಂಗ್ ನೀಡಿದ್ದಾರೆ.
ನವದೆಹಲಿ (ಜ.01): ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಅನಂತ್ ಕುಮಾರ್ ಹೆಗಡೆ ಸಚಿವ ಸಂಪುಟ ಸಹೊದ್ಯೋಗಿ ರಾಮ್'ದಾಸ್ ಆಥಾವಾಲೆ ಮಾತಿನ ತಿರುಗೇಟು ನೀಡಿದ್ದಾರೆ. ಯಾರಾದರೂ ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸಿದರೆ ನಾನವರನ್ನು ಬದಲಾಯಿಸುತ್ತೇವೆ ಎಂದು ಟಾಂಗ್ ನೀಡಿದ್ದಾರೆ.
ಭಾರತದ ಸಂವಿಧಾನವನ್ನು ಬದಲಾಯಿಸಲು ಯಾರಿಗೂ ಸಾಧ್ಯವಿಲ್ಲ. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ. ಅನಂತ್ ಕುಮಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ನಾವು ಸಂವಿಧಾನವನ್ನು ಗೌರವಿಸುತ್ತೇವೆ. ಮುಂದಿನ ದಿನಗಳಲ್ಲಿ ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ. ಈ ಹಿಂದೆ ಕೂಡಾ ಸಾಕಷ್ಟು ಬಾರಿ ಸಂವಿಧಾನವನ್ನು ಬದಲಾಯಿಸಲಾಗಿತ್ತು. ನಾವು ಇದನ್ನು ಬದಲಾಯಿಸುತ್ತೇವೆ ಎಂದು ಕೊಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗಡೆ ಹೇಳಿದ್ದರು. ಇವರ ಈ ಹೇಳಿಕೆ ಚರ್ಚೆಗೆ ಗ್ರಾಸವಾಗಿತ್ತು.
