ವರುಣಾ ಕ್ಷೇತ್ರದಲ್ಲಿಯೇ ಟಿಕೆಟ್ ಕೊಟ್ಟರೆ ಅಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಹೇಳಿದ್ದಾರೆ.
ಬೆಂಗಳೂರು (ನ.28): ವರುಣಾ ಕ್ಷೇತ್ರದಲ್ಲಿಯೇ ಟಿಕೆಟ್ ಕೊಟ್ಟರೆ ಅಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಹೇಳಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಕೆಲಸ ಮಾಡಿದ್ದೇನೆ. ವರುಣಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅಲ್ಲಿನ ಮತದಾರರ ಒತ್ತಡವಿದೆ. ಟಿಕೆಟ್ ಪಡೆಯಲು ಯಾರ ಮೇಲೂ ಒತ್ತಡ ಹೇರುವ ಅಗತ್ಯವಿಲ್ಲ. ಕ್ಷೇತ್ರದ ಜನರ ಅಭಿಪ್ರಾಯದ ಬಗ್ಗೆ ಸಿಎಂ ಹಾಗೂ ಪಕ್ಷಕ್ಕೆ ಗೊತ್ತಿದೆ. ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ. ಟಿಕೆಟ್ ಕೊಡದಿದ್ದರೆ ನನ್ನ ಸ್ಪರ್ಧೆ ಇಲ್ಲ ಎಂದು ಯತೀಂದ್ರ ಹೇಳಿದ್ದಾರೆ.
ಸಿಎಂ ಬ್ಯುಸಿ ಇರುವುದರಿಂದ ಅವರಿಗೆ ವರುಣಾ ಕ್ಷೇತ್ರದ ಆಗುಹೋಗುಗಳ ಬಗ್ಗೆ ಗಮನ ಕೊಡುವುದಕ್ಕೆ ಸಾಧ್ಯವಾಗುವುದಿಲ್ಲ. ಅವರ ಪ್ರತಿನಿಧಿಯಾಗಿ ನಾನು ಅಲ್ಲಿ ಕೆಲಸ ಮಾಡುತ್ತಿದ್ದೇನೆ.ಟಿಕೆಟ್ ಕೊಡುವುದು ಬಿಡುವುದು ಹೈಕಮಾಂಡ್'ಗೆ ಬಿಟ್ಟ ವಿಚಾರ ಎಂದು ಯತೀಂದ್ರ ಹೇಳಿದ್ದಾರೆ.
