ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ನಡುವೆಯೇ ವಿಧಾನ ಪರಿಷತ್‌ ಸದಸ್ಯ ವಿವೇಕರಾವ್‌ ಪಾಟೀಲ್‌, ರಮೇಶ್‌ ಜಾರಕಿಹೊಳಿ ನಿರ್ಧಾರಕ್ಕೆ ನಾವು ಬದ್ಧರಾಗಿದ್ದು ಅವರು ಯಾವ ಪಕ್ಷದಲ್ಲಿರುತ್ತಾರೋ ನಾವು ಕೂಡ ಅವರೊಂದಿಗೆಯೇ ಇರುತ್ತೇವೆ ಎಂದು ಹೇಳಿದ್ದಾರೆ.

ಮಾತ್ರವಲ್ಲ ಶಾಸಕ ಮಹೇಶ್ ಕುಮಟಳ್ಳಿ ಕೂಡ ರಮೇಶ್‌ ಜೊತೆಗಿದ್ದಾರೆ ಎಂದು ತಿಳಿಸಿದ್ದಾರೆ. ನದರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರೇ ನಮ್ಮ ನಾಯಕ. ಅವರು ಎಲ್ಲಿರುತ್ತಾರೋ, ನಾವು ಕೂಡ ಅಲ್ಲಿಯೇ ಇರುತ್ತೇವೆ. ರಮೇಶ ಜಾರಕಿಹೊಳಿ ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದರು. ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ಇದ್ದು ರಮೇಶ ಜಾರಕಿಹೊಳಿ ಅವರಿಗೆ ಒಳ್ಳೆಯದಾಗಲಿದೆ ಎಂದರು.