ಬೆಂಗಳೂರು[ಜ.04] ವಿಧಾನಸೌಧದ ಬಳಿ 14 ಲಕ್ಷ ರೂ. ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ.ಸಚಿವ ಪುಟ್ಟರಂಗ ಶೆಟ್ಟಿ ಸಚಿವಾಲಯದ ಮೋಹನ್ ಎಂಬುವರನ್ನು ವಶಕ್ಕೆ ಪಡೆದಿದ್ದು ದಾಖಲೆಗಳಿಲ್ಲದ 14 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ.

ಶುಕ್ರವಾರ  ಸಂಜೆ 4 ಗಂಟೆ ಸುಮಾರಿಗೆ ಹಣ ವಶಪಡಿಸಿಕೊಳ್ಳಲಾಗಿದ್ದು ಸಚಿವರಿಗೆ ತಲುಪಿಸಲು ಯಾರೋ ಹಣ ನೀಡಿದ್ದರು ಎನ್ನಲಾಗಿದೆ. ಯಾವುದೋ ಗುತ್ತಿಗೆದಾರರಿಂದ ಹಣ ಪಡೆದುಕೊಳ್ಳಲಾಗಿದೆ ಎಂಬ ಮಾತು ಕೇಳಿ ಬಂದಿದ್ದು ಇದಕ್ಕೆ ಗಿರಿಜನ ಅಭಿವೃದ್ಧಿ ನಿಗಮದ ಲಿಂಕ್ ಸಹ ಇದೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿಗೆ ಸವಾಲು ಹಾಕಿದ ಕೆಪಿಸಿಸಿ ಅಧ್ಯಕ್ಷ

ಬಿಜೆಪಿ ನಾಯಕ ಸುರೇಶ್ ಕುಮಾರ್ ಸಹ ಈ ಪ್ರಕರಣಕ್ಕೆ ಸಂಬಂಧಿಸಿ ಟ್ವೀಟ್ ಮಾಡಿದ್ದಾರೆ. ಹಿಂದೆ ಸಿದ್ದರಾಮಯ್ಯ ಸರಕಾರ ಇದ್ದಾಗಲೂ ವಿಧಾನಸೌಧದ ಬಳಿ ಕೋಟಿಗಟ್ಟಲೆ ಹಣ ಪತ್ತೆಯಾಗಿತ್ತು.

ಕಪ್ಪು ಬಣ್ಣದ ಬ್ಯಾಗ್‌ನಲ್ಲಿ ಮೋಹನ್ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದರು. ಅನುಮಾನ ಬಂದು ಪೊಲೀಸರು ಬ್ಯಾಗ್ ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ. ಇದು ನನ್ನ ಸ್ವಂತ ಹಣ ಎಂದು ಮೋಹನ್ ಪೊಲೀಸರ ಬಳಿ ಹೇಳುತ್ತಿದ್ದಾರೆ.