ಬೆಂಗಳೂರು (ಮಾ. 22): ಪ್ರಭಾವ ಬಳಸಿ ಕರ್ನಾಟಕ ಗೃಹ ಮಂಡಳಿ (ಕೆಎಚ್‌ಬಿ)ಯಿಂದ ಮೂರು ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿಸಿಕೊಂಡ ಆರೋಪ ಸಂಬಂಧ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ, ಅವರ ಪತ್ನಿ, ತಂಗಿ ಮತ್ತು ಆಕೆಯ ಪತಿ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದ ಪ್ರಕರಣವನ್ನು ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಸಿ.ಟಿ.ರವಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿತು. ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಸಲ್ಲಿಸಿದ ಬಿ ರಿಪೋರ್ಟ್ ತಿರಸ್ಕರಿಸಿದ ನಂತರ ವಿಶೇಷ ನ್ಯಾಯಾಲಯವು ದೂರುದಾರನ ಪ್ರಮಾಣೀಕೃತ ಹೇಳಿಕೆ ಪಡೆಯದೇ ನೇರವಾಗಿ ಸಮನ್ಸ್ ಜಾರಿಗೊಳಿಸಿದೆ.