ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಸೆಂಟ್ರಲ್ ಕಾಲೇಜಿನಲ್ಲಿ ಇಂದು ನಡೆಯುತ್ತಿರುವ ‘ನಾನು ಗೌರಿ’ ಪ್ರತಿಭಟನಾ ರ್ಯಾಲಿಯಲ್ಲಿ ಸಾವಿರಾರು ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಪ್ರಗತಿಪರ ಚಿಂತಕರು, ಬುದ್ದಿಜೀವಿಗಳು ಬೇರೆ ಬೇರೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ಬೆಂಗಳೂರು (ಸೆ.12): ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಸೆಂಟ್ರಲ್ ಕಾಲೇಜಿನಲ್ಲಿ ಇಂದು ನಡೆಯುತ್ತಿರುವ ‘ನಾನು ಗೌರಿ’ ಪ್ರತಿಭಟನಾ ರ್ಯಾಲಿಯಲ್ಲಿ ಸಾವಿರಾರು ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಪ್ರಗತಿಪರ ಚಿಂತಕರು, ಬುದ್ದಿಜೀವಿಗಳು ಬೇರೆ ಬೇರೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ಕರ್ನಾಟಕ ಜನಶಕ್ತಿ, ಆಮ್ ಆದ್ಮಿ ಪಕ್ಷ, ಸಿಪಿಐ ಪಕ್ಷದ ಸದಸ್ಯರು ಹಾಗೂ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿವೆ. ಸಿಪಿಎಂ ಪಕ್ಷದ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್, ಪತ್ರಕರ್ತ ಪಿ. ಸಾಯಿನಾಥ್, ಸಾಗರಿಕಾ ಘೋಸೆ, ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್, ಜಿಗ್ನೇಶ್ ಮೇವಾನಿ, ಕವಿತಾ ಕೃಷ್ಣನ್, ಆನಂದ್ ಪಟವರ್ಧನ್, ರಾಕೇಶ್ ಶರ್ಮಾ, ಪ್ರಕಾಶ್ ರೈ ಮುಂತಾದವರು ಭಾಗಿಯಾಗಿದ್ದರು.
ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ಸೆಂಟ್ರಲ್ ಕಾಲೇಜು ಮೈದಾನದವರೆಗೆ ಮೆರವಣಿಗೆ ಸಾಗಿದ್ದು, ದಾರಿಯುದ್ದಕ್ಕೂ ಪ್ರತಿಭಟನಾ ಹಾಡುಗಳು, ಗೌರಿ ಲಂಕೇಶ್ ಅಮರ್ ರಹೇ, ಅಮರ್ ರಹೇ ಎಂಬ ಘೋಷಣೆಗಳು ಕೇಳಿ ಬರುತ್ತಿತ್ತು.
