ಬೆಂಗಳೂರು :  ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತಗಳು ಕೆಲವೆಡೆ ಬಿಜೆಪಿಗೆ ಬಿದ್ದಿವೆ ಎಂಬ ಸಚಿವ ಜಿ.ಟಿ.ದೇವೇಗೌಡರ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿಕೆ ಶಿವಕುಮಾರ್ ಅವರು, ನಾನು ಕಾಂಗ್ರೆಸ್‌ನ ವಕ್ತಾರನಲ್ಲ. ಕೇವಲ ಕಾರ್ಯಕರ್ತ ಹಾಗೂ ಸಚಿವ. 

ನನ್ನ ಬಗ್ಗೆ ಮಾತ್ರ ನಾನು ಪ್ರತಿಕ್ರಿಯೆ ನೀಡಬಲ್ಲೆ. ಬೇರೆಯವರ ವಿಷಯಕ್ಕೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಮೈತ್ರಿ ಧರ್ಮ ಪಾಲಿಸಲೇಬೇಕು. ನಾವಂತೂ ಪಾಲನೆ ಮಾಡಿದ್ದೇವೆ. ಅವರೂ ಪಾಲಿಸಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. 

ಇನ್ನು, ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿಯವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕನಸು ಕಾಣುವವರಿಗೆ, ಕನಸಿನಲ್ಲಿ ಸಂತೋಷಪಡುತ್ತೇವೆ ಎನ್ನುವವರಿಗೆ ಬೇಡ ಅನ್ನಲು ಸಾಧ್ಯವೇ ಎಂದು ಟೀಕಿಸಿದರು.