ಉಪಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿಗೆ ತಮ್ಮ ಬೆಂಬಲವಿಲ್ಲಎಂದು ಕಾಂಗ್ರೆಸ್ ಮುಖಂಡ ಎ ಮಂಜು ಹೇಳಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬ ರಾಜಕಾರಣದ ವಿರೋಧಿಯಾಗಿದ್ದು, ಈಗಲೂ ಅದನ್ನೇ ಮುಂದುವರಿಸುತ್ತೇನೆ ಎಂದು ಈ ವೇಳೆ ಹೇಳಿದ್ದಾರೆ. 

ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎ.ಮಂಜು, ಉಪ ಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿಗೆ ತಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿ ದ್ದಾರೆ. ನಾನು ಹಿಂದಿನಿಂದಲೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬ ರಾಜಕಾರಣದ ವಿರೋಧಿಯಾಗಿದ್ದು, ಈಗಲೂ ಅದನ್ನೇ ಮುಂದುವರಿಸು ತ್ತೇನೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾನು ನನ್ನ ಕಾರ್ಯಕರ್ತರನ್ನು ಉಳಿಸಬೇಕಿದೆ ಎಂದು ಹೇಳಿದ್ದಾರೆ. ಅರಕಲಗೂಡಿನ ಹನ್ಯಾಳು ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಗೌಡರನ್ನು ವಿರೋಧಿಸುತ್ತಾ ಈಗ ಅವರನ್ನು ಬೆಂಬಲಿಸುವುದರಲ್ಲಿ ಯಾವ ಅರ್ಥವಿದೆ ಎಂದು ಪ್ರಶ್ನಿಸಿದರು. 

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ನಿಲ್ಲಿಸಲೇಬೇಕೆಂಬುದು ನನ್ನ ನಿಲುವು. ಹೈಕಮಾಂಡ್ ಜತೆಗೂ ಮಾತನಾಡಿದ್ದೇನೆ ಎಂದರು.