ಬೆಂಗಳೂರು [ಜು.31]:  ರಾಷ್ಟ್ರೀಯ ಪಕ್ಷಗಳ ನಡುವೆ ಪ್ರಾದೇಶಿಕ ಪಕ್ಷ ಉಳಿಸಿಕೊಳ್ಳಲು ಹೋರಾಟ ನಡೆಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದೇವೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಅಲ್ಪಸಂಖ್ಯಾತರ ಘಟಕದ ಸಭೆಯನ್ನು ನಡೆಸಿದ ಬಳಿಕ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್‌ ಪಕ್ಷವನ್ನು ರಾಷ್ಟ್ರೀಯ ಪಕ್ಷಗಳ ನಡುವೆ ಉಳಿಸಿಕೊಳ್ಳಬೇಕಿದೆ. ಇದಕ್ಕಾಗಿ ಹೋರಾಟವನ್ನು ನಡೆಸಲಾಗುತ್ತಿದೆ. ಪಕ್ಷದ ಉಳಿವಿಗಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸುವ ಕೆಲಸ ಮಾಡಲಾಗುವುದು ಎಂದರು ಹೇಳಿದರು.

ಅಲ್ಪಸಂಖ್ಯಾತರ ಘಟಕದ ಸಭೆ ನಡೆಸಲಾಗಿದ್ದು, ಅಲ್ಪಸಂಖ್ಯಾತರ ಸಮಾವೇಶ ನಡೆಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಪ್ರತಿನಿತ್ಯ ಒಂದೊಂದು ಘಟಕದ ಸಭೆಯನ್ನು ನಡೆಸಲಾಗುತ್ತಿದೆ. ಆಗಸ್ಟ್‌ ತಿಂಗಳಲ್ಲಿ ಮಹಿಳಾ ವಿಭಾಗದ ಸಮಾವೇಶ ಮತ್ತು ಅಲ್ಪಸಂಖ್ಯಾತರ ಸಮಾವೇಶವನ್ನು ನಡೆಸಲಾಗುವುದು. ಸೆಪ್ಟೆಂಬರ್‌ ತಿಂಗಳಲ್ಲಿ ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಟಜಾತಿ/ವರ್ಗದ ಸಮಾವೇಶಗಳನ್ನು ನಡೆಸಲಾಗುವುದು ಎಂದು ಹೇಳಿದರು.