ಬೆಂಗಳೂರು [ಆ.15]:  ಬಿಜೆಪಿ ಸೇರುವ ಬಗ್ಗೆಯಾಗಲಿ, ಸಚಿವ ಸಂಪುಟ ಸೇರುವ ಬಗ್ಗೆಯಾಗಲಿ ಚರ್ಚೆಯಾಗಿಲ್ಲ. ರಾಜಕೀಯ ನಿವೃತ್ತಿ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಹೊಸಕೋಟೆ ಕ್ಷೇತ್ರದ ಎಂಟಿಬಿ ನಾಗರಾಜ ಹೇಳಿದ್ದಾರೆ. 

ಬುಧವಾರ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಅನರ್ಹತೆ ವಿಚಾರದ ಬಗ್ಗೆ ನ್ಯಾಯಾಲಯದ ತೀರ್ಪು ಬರಬೇಕಿದೆ. ಅದಕ್ಕಾಗಿ ಕಾಯುತ್ತಿದ್ದೇವೆ ಎಂದರು.

ದುಬಾರಿ ರೋಲ್ಸ್ ರಾಯ್ಸ್ ಖರೀದಿಸಿದ ಅನರ್ಹ ಶಾಸಕ MTB ನಾಗರಾಜ್!

ಅನರ್ಹಗೊಂಡಿರುವ ಶಾಸಕರೆಲ್ಲರೂ ಸೇರಿ ಮುಂದಿನ ನಡೆ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು.