IMA ಬಹುಕೋಟಿ ವಂಚನೆ ಪ್ರಕರಣವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣವನ್ನು ಸಿಸಿಬಿಗೆ ವಹಿಸಿದೆ.
ಬೆಂಗಳೂರು, (ಜೂನ್,11): ಬೆಂಗಳೂರಿನ ಶಿವಾಜಿನಗರದ ಪ್ರತಿಷ್ಠಿತ ಐಎಂಎ ವಂಚನೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದನ್ನು ಸಿಎಂ ಕುಮಾರಸ್ವಾಮಿ ಅವರು ಸಿಸಿಬಿಗೆ ವಹಿಸಿದ್ದಾರೆ.
"
ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.
‘ಆತ್ಮಹತ್ಯೆ’ ಮಾಡಿಕೊಂಡ್ರೂ ₹17 ಕೋಟಿ ಟ್ರಾನ್ಸ್‌ಫರ್ ಮಾಡಿಕೊಂಡ ಮನ್ಸೂರ್!
ಐಎಂಎ ಜ್ಯುವೆಲರಿ ಅಂಗಡಿ ಮಾಲೀಕ ಮಹಮ್ಮದ್ ಮನ್ಸೂರ್ ಖಾನ್ ಸಾವಿರಾರು ಜನಕ್ಕೆ ಸಾವಿರಾರೂ ಕೋಟಿ ರೂಪಾಯಿ ಪಂಗನಾಮ ಹಾಕಿ ಪರಾರಿಯಾಗಿದ್ದಾನೆ.
ಈ ಹಿನ್ನೆಲೆಯಲ್ಲಿ ವಂಚನೆಗೊಳದ ಜನರು, ಮಾಲೀಕ ಮನ್ಸೂರ್ ಖಾನ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸರಿಗೆ ದೂರು ನೀಡಿದ್ದಾರೆ.
ಬಹುಕೋಟಿ ವಂಚನೆಯ ಐಎಮ್ ಎ ಮೋಸದ ಜಾಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ದಾವಣಗೆರೆಯಲ್ಲಿಯೂ ಜನರು ಅಪಾರ ಹಣ ಕಳೆದುಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಬಿಡುಗಡೆ ಮಾಡಿ ನಾಪತ್ತೆಯಾಗಿರುವ ಮಹಮ್ಮದ್ ಮನ್ಸೂರ್ ಖಾನ್ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ.
