ಬೆಂಗಳೂರು[ಸೆ. 19] ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಸಿಬಿಐ ನೋಟಿಸ್ ನೀಡಿದೆ.

ಸಿಬಿಐ ವಶದಲ್ಲಿರುವ ವಂಚಕ ಮನ್ಸೂರ್ ಅವರಿಂದ ಸಾಕಷ್ಟು ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ಒಂದೊಂದೆ ಹಂತದ ವಿಚಾರಣೆ ನಡೆದಿದ್ದು ಇದೀಗ ಜಮೀರ್ ಅಹಮದ್ ಅವರಿಗೂ ನೊಟೀಸ್ ನೀಡಲಾಗಿದೆ.

IMA ವಂಚನೆ: ಆರಂಭದಲ್ಲೇ ಎಡವಿತೆ CBI ತನಿಖೆ? ಕಮರಿತು ಹಣ ವಾಪಾಸು ಬರುವ ಆಸೆ?

ಅಧಿಕ ಲಾಭಾಂಶದ ಆಮಿಷವೊಡ್ಡಿ 40 ಸಾವಿರಕ್ಕೂ ಅಧಿಕ ಜನರಿಗೆ ಐ ಮಾನಿಟರಿ ಅಡ್ವೈಸರ್‌ (ಐಎಂಎ) ಕಂಪನಿ ಮಾಲೀಕ ಮಹಮ್ಮದ್‌ ಮನ್ಸೂರ್‌ ಖಾನ್‌ ವಂಚಿಸಿದ್ದ. ಈ ಹಗರಣದಲ್ಲಿ ಹಲವು ರಾಜಕೀಯ ನಾಯಕರು, ಸರ್ಕಾರಿ ಅಧಿಕಾರಿಗಳು ಹಾಗೂ ಉದ್ಯಮಿಗಳು ಸೇರಿದಂತೆ ಹಲವರ ಹೆಸರು ಕೇಳಿ ಬಂದಿತ್ತು.

ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಿವಾಜಿನಗರದ ಶಾಸಕ  ರೋಶನ್ ಬೇಗ್, ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಅವರ ಹೆಸರುಗಳು ಪ್ರಕರಣದಲ್ಲಿ ಕೇಳಿ ಬಂದಿದ್ದವು.