ಸೆಪ್ಟೆಂಬರ್ 10 ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 12 ರಾಜ್ಯಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗುವ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. 

ನವದೆಹಲಿ: ಸೆ. 10, ಸೆ.11 ಮತ್ತು ಸೆ. 12ರಂದು ಕರ್ನಾಟಕ ಸೇರಿದಂತೆ ದೇಶದ 12 ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಕ್ಷಿಣದ ರಾಜ್ಯಗಳ ಪೈಕಿ ಉತ್ತರ ತಮಿಳುನಾಡು ಮತ್ತು ಅದಕ್ಕೆ ಹೊಂದಿಕೊಂಡ ಕರ್ನಾಟಕದ ಭಾಗಗಳಲ್ಲಿ ಸೆ.10 ಮತ್ತು ಸೆ.11ರಂದು ಭಾರೀ ಮಳೆಯಾಗಲಿದೆ. 

ಇನ್ನು ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿರುವ ಉತ್ತರಪ್ರದೇಶ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ ಅರುಣಾಚಲಪ್ರದೇಶ, ಅಸ್ಸಾಂ, ಮೇಘಾಲಯ, ಮಣಿಪುರದಲ್ಲಿ ಭಾರೀ ಮಳೆಯಲಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.