ರೈತರಿಗಾಗಿ ಆವರ್ತ ನಿಧಿ ಸ್ಥಾಪಿಸಿ 10 ಸಾವಿರ ಕೋಟಿ ಮೀಸಲಿಡಬೇಕು, ಹಾಗೂ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಕೋಡಿಹಳ್ಳಿ ಆಗ್ರಹಿಸಿದ್ದಾರೆ.
ಬೆಂಗಳೂರು (ಫೆ.16): ಕೃಷಿ ಬೆಲೆ ಆಯೋಗ ವರದಿಯನ್ನು ಜಾರಿಗೆ ತರಬೇಕೆಂದು ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದ್ದಾರೆ.
ರಾಜ್ಯ ಬಜೆಟ್ ಸಂಬಂಧ ರೈತರೊಂದಿಗೆ ಮುಖ್ಯಮಂತ್ರಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಲಾಬಿಯಿಂದ ಆನ್’ಲೈನ್ ಟ್ರೇಡಿಂಗ್ ಕಾರ್ಯಕ್ರಮ ನಿಂತು ಹೋಗಿದೆ, ಅದನ್ನು ಮತ್ತೆ ಪ್ರಾರಂಭ ಮಾಡಬೇಕು ಎಂದು ಹೇಳಿದ್ದಾರೆ.
ರೈತರಿಗಾಗಿ ಆವರ್ತ ನಿಧಿ ಸ್ಥಾಪಿಸಿ 10 ಸಾವಿರ ಕೋಟಿ ಮೀಸಲಿಡಬೇಕು, ಹಾಗೂ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಹೇಳಿದ್ದಾರೆ.
ಸಭೆ ಮುಕ್ತಾಯಗೊಂಡ ಬಳಿಕ ಸಿಎಂ ತೆರಳಿದ ಬಳಿಕ ಕೃಷಿ ಸಚಿವ ಕೃಷ್ಣ ಭೈರೇಗೌಡ ಎದುರಲ್ಲೇ ರೈತ ಮುಖಂಡರು 'ರೈತ ಸಾಲಗಾರನಲ್ಲ, ಸರ್ಕಾರವೇ ಬಾಕಿದಾರ' ಎಂದು ಘೋಷಣೆ ಕೂಗಿದ್ದಾರೆ.
