ನಾನು ಕರ್ನಾಟಕವನ್ನು ಪ್ರತಿನಿಧಿಸುವ ಸಂಸದನಾಗಿದ್ದು, ನನ್ನ ರಾಜ್ಯದ ಜನರ ಹಿತದೃಷ್ಟಿ ಕಾಪಾಡುವುದು ನನ್ನ ಕರ್ತವ್ಯವಾಗಿದೆ.
ಬೆಂಗಳೂರು(ಮೇ.07): ರಿಯಲ್ ಎಸ್ಟೇಟ್ ಉದ್ಯಮಕ್ಕೆ ಕಾನೂನು ಮೂಲಕ ಕಡಿವಾಣ ಹಾಕುವ ಬಹು ನಿರೀಕ್ಷಿತ ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ನಮ್ಮ ಬೆಂಗಳೂರು ಫೌಂಡೇಷನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಬೆಂಗಳೂರಿನ ಟೌನ್'ಹಾಲ್ ಮುಂದೆ ಜಯಾಯಿಸಿದ ಪೈಟ್'ಪಾರ್ ರೇರಾ ಸಂಘಟನೆ ಕಾರ್ಯಕರ್ತರು ಹಾಗೂ ನಮ್ಮ ಬೆಂಗಳೂರು ಫೌಂಡೇಷನ್ ಸದಸ್ಯರು, ಶೀಘ್ರದಲ್ಲೇ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದರು.
ರೇರಾ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ರೇರಾ ಕಾಯ್ದೆ ಜಾರಿಯಾಗಬೇಕು. ಇದು ಮನೆ ಕೊಳ್ಳುವ ಆಸೆಯುಳ್ಳ ಸಾರ್ವಜನಿಕರು ನಡೆಸುತ್ತಿರುವ ಹೋರಾಟ. ಮನೆ ಕೊಳ್ಳುವ ಜನರ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ನಾನು ಕರ್ನಾಟಕವನ್ನು ಪ್ರತಿನಿಧಿಸುವ ಸಂಸದನಾಗಿದ್ದು, ನನ್ನ ರಾಜ್ಯದ ಜನರ ಹಿತದೃಷ್ಟಿ ಕಾಪಾಡುವುದು ನನ್ನ ಕರ್ತವ್ಯವಾಗಿದೆ. ರೇರಾ ಕಾಯ್ದೆಯನ್ನು ಜಾರಿಗೊಳಿಸದಿದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ಸರ್ಕಾರವನ್ನು ಎಚ್ಚರಿಸಿದ್ದಾರೆ.
