ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿ ಯಾಗಿ ಆ.11 ರಂದು ಪ್ರಮಾಣ ವಚನ ಸ್ವೀಕರಿ ಸಲು ನಿರ್ಧರಿಸಿರುವ ಮಾಜಿ ಕ್ರಿಕೆಟಿಗ, ಪಿಟಿಐ ನಾಯಕ ಇಮ್ರಾನ್ ಖಾನ್ ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಭಾರತದ ಗಣ್ಯರನ್ನೂ ಆಹ್ವಾನಿಸಿದ್ದಾರೆ. 

ಮಾಜಿ ಕ್ರಿಕೆಟಿಗರಾದ ಸುನೀಲ್ ಗವಾಸ್ಕರ್, ಕಪಿಲ್ ದೇವ್, ನವಜೋತ್ ಸಿಂಗ್ ಸಿಧು, ಬಾಲಿವುಡ್ ನಟ ಆಮಿರ್ ಖಾನ್ ಆಹ್ವಾನಿತರ ಪಟ್ಟಿಯಲ್ಲಿ ಸೇರಿದ್ದಾರೆ. ಜು.25 ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಇಮ್ರಾನ್ ಖಾನ್‌ರ ಪಕ್ಷ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಹಾಗಾಗಿ, ಇತರರ ಬೆಂಬಲ ಪಡೆದು ಸರ್ಕಾರ ರಚಿಸುವ ಸಿದ್ಧತೆ ನಡೆದಿದೆ.