ಭಾರತೀಯ ವಿಮಾನಯಾನ ಉದ್ಯಮದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರಿಗಾಗಿ 6 ಆಸನಗಳನ್ನು ಮೀಸಲಿಡಲು ಭಾರತೀಯ ವಿಮಾನಯಾನ ಸಂಸ್ಥೆ ನಿರ್ಧರಿಸಿದೆ.

ನವದೆಹಲಿ (ಜ.12): ಭಾರತೀಯ ವಿಮಾನಯಾನ ಉದ್ಯಮದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರಿಗಾಗಿ 6 ಆಸನಗಳನ್ನು ಮೀಸಲಿಡಲು ಭಾರತೀಯ ವಿಮಾನಯಾನ ಸಂಸ್ಥೆ ನಿರ್ಧರಿಸಿದೆ.

ದೇಶಿಯ ವಿಮಾನಗಳಲ್ಲಿ ಈ ವ್ಯವಸ್ಥೆ ಮುಂದಿನ ವಾರದಿಂದ ಜಾರಿಗೆ ಬರಲಿದೆ. ಒಬ್ಬಂಟಿಯಾಗಿ ಪ್ರಯಾಣಿಸುವ ಮಹಿಳೆಯರಿಗೆ ಶೌಚಾಲಯಕ್ಕೆ ಹೋಗಲು ಆಗುವ ಅನಾನುಕೂಲತೆಯನ್ನು ತಪ್ಪಿಸಲು ಎಕಾನಮಿ ಕ್ಲಾಸ್ ನ 3 ನೇ ಸಾಲಿನಲ್ಲಿ 6 ಆಸನಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಏರ್ ಇಂಡಿಯಾ ಹೇಳಿದೆ. ಜ. 18 ರಿಂದ ಇದು ಜಾರಿಗೆ ಬರಲಿದೆ.

ಕುಟುಂಬ ಸಮೇತ ಪ್ರಯಾಣ ಮಾಡುವ ಮಹಿಳೆಯರಿಗೆ ಈ ಆಸನಗಳಲ್ಲಿ ಕುಳಿತುಕೊಳ್ಳುವ ಅವಕಾಶವಿಲ್ಲ.