ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರಾವಧಿ ನಾಳೆ ಸೋಮವಾರ ಮುಗಿಯಲಿದ್ದು, ಇಂದು ಸಂಸತ್ ಭವನದ ಸೆಂಟ್ರಲ್ ಹಾಲ್’ನಲ್ಲಿ ಬೀಳ್ಕೋಡುಗೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ತಮಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನರ್ಪಿಸಿದರು.

ನವದೆಹಲಿ (ಜು.23): ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರಾವಧಿ ನಾಳೆ ಸೋಮವಾರ ಮುಗಿಯಲಿದ್ದು, ಇಂದು ಸಂಸತ್ ಭವನದ ಸೆಂಟ್ರಲ್ ಹಾಲ್’ನಲ್ಲಿ ಬೀಳ್ಕೋಡುಗೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ತಮಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನರ್ಪಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ದೇವೇಗೌಡ, ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲಾ ಪಕ್ಷದ ಸಂಸದರು ಭಾಗಿಯಾಗಿದ್ದರು.

ಜು.25 ರಂದು ರಾಮನಾಥ್ ಕೋವಿಂದ ರಾಷ್ಟ್ರಪತಿಯಾಗಿ ಪದಗ್ರಹಣ ಮಾಡಲಿದ್ದಾರೆ.