ಅಮೇಠಿ ಕ್ಷೇತ್ರ ವ್ಯಾಪ್ತಿಯಲ್ಲಿ ಐದು ಕ್ಷೇತ್ರಗಳು ಬರುತ್ತವೆ. ಆ ಪೈಕಿ ನಾಲ್ಕರಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದರೆ, ಒಂದರಲ್ಲಿ ಸಮಾಜವಾದಿ ಪಕ್ಷ ಗೆದ್ದಿದೆ. ಉತ್ತರಪ್ರದೇಶದಲ್ಲಿ ಕಾಂಗ್ರೆಸ್- ಸಮಾಜವಾದಿ ಪಕ್ಷದ ನಡುವೆ ಮೈತ್ರಿ ಏರ್ಪಟ್ಟಿತ್ತಾದರೂ ಅಮೇಠಿ ವ್ಯಾಪ್ತಿಯ ಗೌರಿಗಂಜ್‌ನಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಅಲ್ಲಿ ಸಮಾಜವಾದಿ ಪಕ್ಷ ಗೆದ್ದಿದೆ.

ಲಖನೌ(ಮಾ.11): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮಣಿಸಲು ಸಮಾಜವಾದಿ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಹೋರಾಟ ನಡೆಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂ ಅವರಿಗೆ ಸ್ವಕ್ಷೇತ್ರದಲ್ಲೂ ತೀವ್ರ ಮುಖಭಂಗವಾಗಿದೆ. ರಾಹುಲ್ ಅವರು ಪ್ರತಿನಿಸುತ್ತಿರುವ ಅಮೇಠಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಗಳಿಸಲೂ ವಿಫಲವಾಗಿದೆ.

ಅಮೇಠಿ ಕ್ಷೇತ್ರ ವ್ಯಾಪ್ತಿಯಲ್ಲಿ ಐದು ಕ್ಷೇತ್ರಗಳು ಬರುತ್ತವೆ. ಆ ಪೈಕಿ ನಾಲ್ಕರಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದರೆ, ಒಂದರಲ್ಲಿ ಸಮಾಜವಾದಿ ಪಕ್ಷ ಗೆದ್ದಿದೆ. ಉತ್ತರಪ್ರದೇಶದಲ್ಲಿ ಕಾಂಗ್ರೆಸ್- ಸಮಾಜವಾದಿ ಪಕ್ಷದ ನಡುವೆ ಮೈತ್ರಿ ಏರ್ಪಟ್ಟಿತ್ತಾದರೂ ಅಮೇಠಿ ವ್ಯಾಪ್ತಿಯ ಗೌರಿಗಂಜ್‌ನಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಅಲ್ಲಿ ಸಮಾಜವಾದಿ ಪಕ್ಷ ಗೆದ್ದಿದೆ.

ಇನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂ ಪ್ರತಿನಿಸುವ ರಾಯ್‌ಬರೇಲಿ ವ್ಯಾಪ್ತಿಯ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ 2, ಬಿಜೆಪಿ 2 ಹಾಗೂ ಸಮಾಜವಾದಿ ಪಕ್ಷ ಒಂದು ಸ್ಥಾನದಲ್ಲಿ ಗೆದ್ದಿದೆ.