Asianet Suvarna News Asianet Suvarna News

ಏಕಾಏಕಿ ನದಿ ನೀರಿನ ಮಟ್ಟ ಏರಿಕೆ: ಹವಾಮಾನ ಇಲಾಖೆ ಮುನ್ಸೂಚನೆ

ಕೆಲ ದಿನಗಳ ಹಿಂದೆ ಕೇರಳದಲ್ಲಿ ಉಂಟಾದ ದಿಢೀರ್‌ ಪ್ರವಾಹಕ್ಕೆ ಅಣೆಕಟ್ಟೆಗಳಿಂದ ಏಕಾಏಕಿ ನೀರು ಬಿಟ್ಟಿದ್ದು ಹಾಗೂ ನದಿಗಳಲ್ಲಿ ನೀರಿನ ಮಟ್ಟಹೆಚ್ಚಾಗಿದ್ದೇ ಕಾರಣ ಎಂದು ಹೇಳಲಾಗಿತ್ತು. ಹೀಗಾಗಿ ಭವಿಷ್ಯದಲ್ಲಿ ಇಂತಹ ಸನ್ನಿವೇಷಗಳು ಉದ್ಭವಿಸದಂತೆ ತಡೆಯಲು ಭಾರೀ ಮಳೆಯಿಂದ ನದಿ ಹಾಗೂ ಜಲಾಶಗಳಲ್ಲಿ ಏಕಾಏಕಿ ನೀರಿನ ಮಟ್ಟಹೆಚ್ಚಾದ ಸಂದರ್ಭದಲ್ಲಿ ಆ ಬಗ್ಗೆ ಮಾಹಿತಿ ನೀಡುವ ತಂತ್ರಜ್ಞಾನವೊಂದನ್ನು ಭಾರತೀಯ ಹವಾಮಾನ ಇಲಾಖೆ ಅಭಿವೃದ್ಧಿಪಡಿಸಿದೆ. 

Increase In River Water Warning From weatherman
Author
New Delhi, First Published Nov 24, 2018, 11:28 AM IST

ನವದೆಹಲಿ[ನ.24]: ಕೆಲ ದಿನಗಳ ಹಿಂದೆ ಕೇರಳದಲ್ಲಿ ಉಂಟಾದ ದಿಢೀರ್‌ ಪ್ರವಾಹಕ್ಕೆ ಅಣೆಕಟ್ಟೆಗಳಿಂದ ಏಕಾಏಕಿ ನೀರು ಬಿಟ್ಟಿದ್ದು ಹಾಗೂ ನದಿಗಳಲ್ಲಿ ನೀರಿನ ಮಟ್ಟಹೆಚ್ಚಾಗಿದ್ದೇ ಕಾರಣ ಎಂದು ಹೇಳಲಾಗಿತ್ತು. ಹೀಗಾಗಿ ಭವಿಷ್ಯದಲ್ಲಿ ಇಂತಹ ಸನ್ನಿವೇಷಗಳು ಉದ್ಭವಿಸದಂತೆ ತಡೆಯಲು ಭಾರೀ ಮಳೆಯಿಂದ ನದಿ ಹಾಗೂ ಜಲಾಶಗಳಲ್ಲಿ ಏಕಾಏಕಿ ನೀರಿನ ಮಟ್ಟಹೆಚ್ಚಾದ ಸಂದರ್ಭದಲ್ಲಿ ಆ ಬಗ್ಗೆ ಮಾಹಿತಿ ನೀಡುವ ತಂತ್ರಜ್ಞಾನವೊಂದನ್ನು ಭಾರತೀಯ ಹವಾಮಾನ ಇಲಾಖೆ ಅಭಿವೃದ್ಧಿಪಡಿಸಿದೆ.

ಇದರಿಂದ ಮಳೆ ಪರಿಣಾಮಗಳ ಬಗ್ಗೆ ಸೂಕ್ಷ್ಮವಾಗಿ ಅವಲೋಕಿಸಲು ರಾಜ್ಯ ಸರ್ಕಾರಗಳಿಗೆ ನೆರವಾಗಲಿದೆ. ‘ಪರಿಣಾಮ ಆಧಾರಿತ ಮುನ್ಸೂಚನೆ ಕ್ರಮ’ ಎಂಬ ತಂತ್ರಜ್ಞಾನ ಇದಾಗಿದ್ದು, ಘಟನೆಯ ಪೂರ್ವ ಸನ್ನಿವೇಶವನ್ನು ತೋರಿಸಲಿದೆ. ಇದರಿಂದ ಅಧಿಕಾರಿಗಳಿಗೆ ಜಲಾಶಯದಿಂದ ನೀರು ಬಿಡುಗಡೆ ಮಾಡಬೇಕೇ ಬೇಡವೇ ಎಂಬ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹವಾಮಾನ ಇಲಾಖೆ ಮುಖ್ಯಸ್ಥ ಕೆ.ಜೆ. ರಮೇಶ್‌ ಹೇಳಿದ್ದಾರೆ.

Follow Us:
Download App:
  • android
  • ios