ರಾಜ್ಯ ನಿರುದ್ಯೋಗಿ ವಿಕಲಚೇತನ ಸಂಘರ್ಷ ಸಮಿತಿಯ ಅನಿರ್ಧಿಷ್ಠಾವಧಿ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಬೆಂಗಳೂರು (ಡಿ. 21): ರಾಜ್ಯ ನಿರುದ್ಯೋಗಿ ವಿಕಲಚೇತನ ಸಂಘರ್ಷ ಸಮಿತಿಯ ಅನಿರ್ಧಿಷ್ಠಾವಧಿ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಮಹಿಳೆಯರು ಸೇರಿದಂತೆ ನೂರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ದುಡಿಯುವ ಕೈಗೆ ನೌಕರಿ ಕೊಡಿ ಇಲ್ಲವೆ ಭಿಕ್ಷೆ ಬೇಡಲು ಅವಕಾಶ ಕೊಡಿ ಎಂಬ ಘೋಷವಾಕ್ಯದೊಂದಿಗೆ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ವಿಕಲಚೇತನರಿಗೆ ಸರ್ಕಾರಿ ಉದ್ಯೋಗದಲ್ಲಿರುವ ಮೀಸಲಾತಿ ಅಸಮಾನತೆಯನ್ನು ಹೋಗಲಾಡಿಸಬೇಕು. ವಿಶೇಷಚೇತನರಿಗಾಗಿಯೆ ಪ್ರತ್ಯೇಕ ಮಂತ್ರಿ ಬೇಕೆಂದು ಆಗ್ರಹಪಡಿಸಿದ್ದಾರೆ.
ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟರು ಸರ್ಕಾರ ನಮ್ಮತ್ತ ಗಮನಹರಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದು ಪ್ರತಿಭಟನೆ ನಿರ್ಲಕ್ಷ ಮಾಡಿದ್ರೆ ಅಮರಾಣಾಂತಿಕ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
