Asianet Suvarna News Asianet Suvarna News

ಸ್ವಾತಂತ್ರ್ಯ ದಿನಾಚರಣೆಗೆ ಗಣ್ಯರ ಶುಭಾಷಯ: ಯಾರು, ಏನಂದ್ರು?

72ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ! ಗಣ್ಯರಿಂದ ಸ್ವಾತಂತ್ರ್ಯ ದಿನಾಚರಣೆ ಶುಭಾಷಯ! ಟ್ವಿಟ್ಟರ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಶುಭಾಷಯಗಳ ಮಹಾಪೂರ

 

Independence Day wishes pour in
Author
Bengaluru, First Published Aug 15, 2018, 12:43 PM IST

ಬೆಂಗಳೂರು(ಆ.15): ದೇಶ ಇಂದು 72ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಭಾಷಣ ಮಾಡಿದ್ದಾರೆ. ಇತ್ತ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕೂಡ ಬೆಂಗಳೂರಿನ ಮಾಣಿಕ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಇನ್ನು 72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ರಂಗದ ಗಣ್ಯರು ದೇಶದ ಜನತೆಗೆ ಶುಭಾಷಯ ಕೋರಿದ್ದು, ಪ್ರಮುಖವಾಗಿ ರಾಜಕೀಯ, ಸಿನಿಮಾ, ಕ್ರೀಡಾ ರಂಗದ ದಿಗ್ಗಜರು ಟ್ವೀಟ್ ಮೂಲಕ ಸ್ವಾತಂತ್ರ್ಯ ದಿನಾಚರಣೆ ಶುಭ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ 72ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ ತಿಳಿಸಿದ್ದು, ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಷಯಗಳು ಎಂದು ವಿಶ್ ಮಾಡಿದ್ದಾರೆ.

ಅದರಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಶುಭಾಷಯ ತಿಳಿಸಿದ್ದು, ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆಯ ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ.

ಇನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಟ್ವಿಟ್ಟರ್ ಮೂಲಕ ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ ತಿಳಿಸಿದ್ದಾರೆ. ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಇನ್ನು ಬಾಲಿವುಡ್ ಶೆಹನ್ ಶಾಹ್ ಅಮಿತಾಬ್ ಬಚ್ಚನ್ ಕೂಡ ಟ್ವಿಟ್ಟರ್ ಮೂಲಕ ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಷಯ ತಿಳಿಸಿದ್ದಾರೆ.

ಇನ್ನು ಸ್ಯಾಂಡಲ್ ವುಡ್ ನಟ ದರ್ಶನ್ ಕೂಡ ಟ್ವಿಟ್ಟರ್ ಮೂಲಕ ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಷಯ ತಿಳಿಸಿದ್ದಾರೆ.

ಇನ್ನು ನಟ ರಮೇಶ್ ಅರವಿಂದ್ ಕೂಡ ಟ್ವಿಟ್ಟರ್ ಮೂಲಕ ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಷಯ ತಿಳಿಸಿದ್ದಾರೆ.

ಇನ್ನು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಕೂಡ ಟ್ವಿಟ್ಟರ್ ಮೂಲಕ ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಷಯ ತಿಳಿಸಿದ್ದಾರೆ.

ಇನ್ನು ಮಾಜಿ ಕ್ರಿಕೆಟಿಗ, ನಜಾಫ್ ಗಡ್ ಸಚಿನ್ ಎಂದೇ ಖ್ಯಾತಿ ಪಡೆದಿರುವ ವಿರೇಂದ್ರ ಸೆಹ್ವಾಗ್ ಕೂಡ ಟ್ವಿಟ್ಟರ್ ಮೂಲಕ ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಷಯ ತಿಳಿಸಿದ್ದಾರೆ.

ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಕೂಡ ಜನತೆಗೆ 72ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ ತಿಳಿಸಿದ್ದು, ವಿಶ್ವದೆಲ್ಲೆಡೆ ನೆಲೆಸಿರುವ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯಗಳು ಎಂದು ತಿಳಿಸಿದ್ದಾರೆ.

 

Follow Us:
Download App:
  • android
  • ios