ಡಾ.ಅಂಬೇಡ್ಕರ್ ಅವರ 60 ನೇ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಿ ಸಂಸತ್ತು ಕಟ್ಟಡದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ನವದೆಹಲಿ (ಡಿ.06): ದೇಶಕ್ಕೆ ಸಲ್ಲಿಸಿರುವ ಸೇವೆಗಾಗಿ ಇಡೀಯ ಭಾರತ ದೇಶವು ಸಂವಿಧಾನ ಪಿತಾಮಹಾ ಅಂಬೇಡ್ಕರ್ ಅವರಿಗೆ ಚಿರಋಣಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಡಾ.ಅಂಬೇಡ್ಕರ್ ಅವರ 60 ನೇ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಿ ಸಂಸತ್ತು ಕಟ್ಟಡದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ಕಾರ್ಯಕ್ರಮದಲ್ಲಿ ಉಪ-ರಾಷ್ಟ್ರಪತಿ ಹಾಮಿದ್ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಮತ್ತಿತ್ರ ರಾಜಕೀಯ ನೇತಾರರು ಭಾಗವಹಿಸಿದ್ದರು.